ಶತಕ ವಂಚಿತ ಡೇವಿಡ್ ವಾರ್ನರ್ ಮತ್ತು ರೊವನ್ ಪೊವೆಲ್ ಸಿಡಿಲಬ್ಬರದ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 21 ರನ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಐಪಿಎಲ್ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಮುಂಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 207 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಗೆ 186 ರನ್ ಗಳಿಸಲಷ್ಟೇ ಶಕ್ತವಾಯಿತು.
ಕಠಿಣ ಗುರಿ ಬೆಂಬತ್ತಿದ ಹೈದರಾಬಾದ್ ತಂಡ 37 ರನ್ ಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಮಧ್ಯಮ ಕ್ರಮಾಂಕದಲ್ಲಿ ಏಡಿನ್ ಮರ್ಕರಂ (42 ರನ್, 25 ಎಸೆತ, 4 ಬೌಂಡರಿ, 3 ಸಿಕ್ಸರ್) ಮತ್ತು ನಿಕೊಲಸ್ ಪೂರನ್ 34 ಎಸೆತಗಳಲ್ಲಿ 2 ಬೌಂಡರಿ ಮತ್ತು 6 ಸಿಕ್ಸರ್ ಒಳಗೊಂಡ 62 ರನ್ ಗಳಿಸಿ ಹೋರಾಟ ನಡೆಸಿದರೂ ಪ್ರಯೋಜನವಾಗಲಿಲ್ಲ. ಡೆಲ್ಲಿ ಪರ ಖಲೀಲ್ ಅಹ್ಮದ್ 3, ಶಾರ್ದೂಲ್ ಠಾಕೂರ್ 2 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಡೆಲ್ಲಿ ತಂಡ ಡೇವಿಡ್ ವಾರ್ನರ್ 58 ಎಸೆತಗಳಲ್ಲಿ 12 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ ಅಜೇಯ 92 ಮತ್ತು ರೊವನ್ ಪೊವೆಲ್ 35 ಎಸೆತಗಳಲ್ಲಿ 3 ಬೌಂಡರಿ ಮತ್ತು 6 ಸಿಕ್ಸರ್ ಒಳಗೊಂಡ 67 ರನ್ ಗಳ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ 200ರ ಗಡಿ ದಾಟಿತು.