ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶ್ರೀಲಂಕಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಮುಗಿಮುಟ್ಟಿದ್ದು, ಸೋಮವಾರ ಪ್ರತಿಭಟನಾಕಾರರು ಶಾಸಕ ಹಾಗೂ ಮಾಜಿ ಸಚಿವರ ಮನೆಗೆ ಬೆಂಕಿ ಹಚ್ಚಿ ಭಸ್ಮ ಮಾಡಿದ್ದಾರೆ.
ಸರಕಾರದ ವಿರುದ್ಧದ ಹೋರಾಟ ತೀವ್ರಗೊಂಡಿದ್ದು, ಮೌಂಟ್ ಲೆವಿನಿಯಾದಲ್ಲಿರುವ ಮಾಜಿ ಸಚಿವ ಜಾನ್ ಸ್ಟನ್ ಫೆರ್ನಾಂಡೊ ಅವರ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಾಕಿದ್ದಾರೆ. ಇದೇ ವೇಳೆ ಸಂಸದ ಸನತ್ ನಿಶಾಂತ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ.

ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆ ನೀಡಿದ ನಂತರವೂ ನಿಷೇಧಾಜ್ಞೆ ನಡುವೆ ಸಾವಿರಾರು ಪ್ರತಿಭಟನಾಕಾರರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದು, ಮಾಜಿ ಸಚಿವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯಿಂದ ಇಡೀ ಮನೆ ಭಸ್ಮವಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.






