ವಿಧಾನಸಭೆಯಿಂದ ವಿಧಾನಪರಿಷತ್ಗೆ ಆಯ್ಕೆಯಾಗಿರುವ 7 ಸದಸ್ಯರ ಅವಧಿ ಜೂನ್ 14 ರಂದು ಮುಕ್ತಾಯವಾಗಲಿದ್ದು ಈ ಸ್ಥಾನಗಳನ್ನು ಭರ್ತಿ ಮಾಡಲು ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ತಿಳಿದು ಬಂದಿದೆ.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ. ಬಿಜೆಪಿಯ ಲಕ್ಷ್ಮಣ ಸವದಿ, ಲೆಹೆರ್ ಸಿಂಗ್ ಸಿರೋಯಾ, ಕಾಂಗ್ರೆಸ್ನ ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಜೆಡಿಎಸ್ನ ಕೆ.ವಿ.ನಾರಾಯಣ ಸ್ವಾಮಿ ಹಾಗೂ ಎಚ್.ಎಂ.ರಮೇಶ್ ಗೌಡ ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಮೇ 17ರಂದು ಅಧಿಸೂಚನೆಯನ್ನ ಹೊರಡಿಸಲಾಗುತ್ತದೆ ಮೇ 24 ನಾಮಪತ್ರ ಸಲ್ಲಿಸಲು ಕೊನೆಯ ದಿನ, ಮೇ 25 ನಾಮಪತ್ರಗಳ ಪರಿಶೀಲನೆ, ಮೇ 27 ನಾಮಪತ್ರ ಹಿಂಪಡೆಯಲು ಕೊನೆಯ ದಿನ ಎಂದು ಆಯೋಗ ತಿಳಿಸಿದೆ.
ಜೂನ್ 3ರಂದು ಬೆಳ್ಳಗ್ಗೆ 9 ರಿಂದ ಸಂಜೆ 4ರವರೆಗೂ ಮತದಾನ ನಡೆಯಲಿದ್ದು ಅದೇ ದಿನ ಸಂಜೆ ಪಲಿತಾಂಶವನ್ನ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.






