ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರ ಮತ್ತು ನದಿಗೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಉಡುಪಿ ಜಿಲ್ಲಾಧಿಕಾರಿ ಮೇ 17 ಮತ್ತು 19ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೇ 18ರಂದು ರೆಡ್ ಅಲರ್ಟ್ ಘೋಷಿಸಿದ್ದಾರೆ.

ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮುಂಗಾರು ಆರಂಭಕ್ಕೂ ಮುನ್ನವೇ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.