ಕಳೆದ ಹಲವು ದಿನಗಳಿಂದೆ ಸೂರ್ಯನ ಬಿಸಿಲಿಗೆ ತತ್ತರಿಸಿ ಹೋಗಿದ್ದ ಬೆಂಗಳೂರು ಜನರಿಗೆ ಈಗ ಮಳೆರಾಯನ ಕಾಟ ಶುರುವಾಗಿದೆ. ಕಳೆದ ಒಂದುವಾರಗಳಿಂದ ವರುಣ ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದಾನೆ ಎಂದರೆ ತಪ್ಪಾಗಲಾರದು.
ಹೌದು, ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿಯಲಿದ್ದು, ಇಂದು ಕೂಡ ಸಂಜೆಯ ಬಳಿಕ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಹೀಗಾಗಿ, ಇಂದು ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 3 ದಿನಗಳ ಕಾಲ ಸಿಲಿಕಾಲ್ ಸಿಟಿ ಬೆಂಗಳೂರಿನಲ್ಲಿ ಸಂಜೆಯ ವೇಳೆ ಭಾರಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ.






