• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ : ಮೋಹನ್‌ ದಾಸರಿ ಆಗ್ರಹ

Any Mind by Any Mind
May 18, 2022
in ಕರ್ನಾಟಕ
0
ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ : ಮೋಹನ್‌ ದಾಸರಿ ಆಗ್ರಹ
Share on WhatsAppShare on FacebookShare on Telegram

ಬೆಂಗಳೂರಿನ ಜನರು ಮಳೆಗೆ ತತ್ತರಿಸಿ, ಕೆಲವರು ಪ್ರಾಣ ಕಳೆದುಕೊಂಡಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಬೇಜವಾಬ್ದಾರಿಯೇ ಕಾರಣ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಟೀಕಿಸಿದರು.

ADVERTISEMENT

ಮಾಧ್ಯಮಗಳ ಜೊತೆ ಮಾತನಾಡಿದ ಮೋಹನ್‌ ದಾಸರಿ, “ರಾಜಕಾಲುವೆ ಹೆಸರಿನಲ್ಲಿ ಬಿಜೆಪಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿಯನ್ನು ಲೂಟಿ ಮಾಡಿದ್ದ ಪರಿಣಾಮ, ಜನರು ರಸ್ತೆಗಳಲ್ಲಿ ಓಡಾಡಲು ದೋಣಿಯನ್ನು ಬಳಸಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ತಗ್ಗು ಪ್ರದೇಶದಲ್ಲಿರುವ ಜನರು ಮಳೆಗಾಲ ಬಂತೆಂದರೆ ಜೀವ ಕೈಯಲ್ಲಿಟ್ಟುಕೊಂಡು ಜೀವನ ನಡೆಸುವಂತಾಗಿದೆ. ತಾವಿದ್ದ ಸ್ಥಳದಲ್ಲಿ ನೀರು ತುಂಬಿಕೊಂಡಿದ್ದರಿಂದ ಮಂಗಳವಾರ ರಾತ್ರಿ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟೆಲ್ಲ ಅನಾಹುತಕ್ಕೆ ಕಾರಣವಾಗಿರುವ ಭ್ರಷ್ಟ ಬಿಜೆಪಿ ನಾಯಕರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು, ಅದನ್ನು ಹರಾಜು ಹಾಕಿ, ಬಂದ ಹಣದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

“ಸಿಲಿಕಾನ್‌ ಸಿಟಿಯಲ್ಲಿ ಸಣ್ಣ ಮಳೆಯಾದರೂ ಕಟ್ಟಡಗಳಿಗೆ ನೀರು ನುಗ್ಗಿ ಜಲಪ್ರಳಯವಾಗುವುದು ಸಾಮಾನ್ಯವಾಗಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ರಾಜಕಾಲುವೆ ಒತ್ತುವರಿ. ರಾಜಕಾಲುವೆ ಒತ್ತುವರಿ ತೆರವು ಎಂಬ ಮಾಯಾಜಾಲವು 2016ರಿಂದಲೂ ನಿಗೂಢವಾಗಿಯೇ ಉಳಿದಿದೆ. 2626 ಕಟ್ಟಡಗಳ ಪೈಕಿ 1480 ಕಟ್ಟಡಗಳು ತೆರವಾಗಿದ್ದು, 714 ಕಟ್ಟಡಗಳ ತೆರವಿಗೆ ಇನ್ನೂ ಮುಹೂರ್ತ ಕೂಡಿ ಬಂದಿಲ್ಲ. ರಾಜಕಾಲುವೆ ಮೇಲೆ ವಸತಿ ಮತ್ತು ವಾಣಿಜ್ಯ ಕಟ್ಟಡಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವುಗಳನ್ನು ತೆರವುಗೊಳಿಸಲು ಪಾಲಿಕೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ” ಎಂದು ಮೋಹನ್‌ ದಾಸರಿ ಹೇಳಿದರು.

“ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ತೀರ್ಮಾನ ಮಾಡಿದ್ದು, 714 ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿತ್ತು. ಪೂರ್ವ ವಲಯದಲ್ಲಿ 110 ಕಟ್ಟಡ, ಪಶ್ಚಿಮ ವಲಯದಲ್ಲಿ 59 ಕಟ್ಟಡ, ದಕ್ಷಿಣ ವಲಯದಲ್ಲಿ 20 ಕಟ್ಟಡ, ಕೋರಮಂಗಲ ವ್ಯಾಲಿ ವಲಯದಲ್ಲಿ 3 ಕಟ್ಟಡ, ಯಲಹಂಕ ವಲಯದಲ್ಲಿ 103 ಕಟ್ಟಡ, ಮಹದೇವಪುರ ವಲಯದಲ್ಲಿ 184 ಕಟ್ಟಡ, ಬೊಮ್ಮನಹಳ್ಳಿ ವಲಯದಲ್ಲಿ 92 ಕಟ್ಟಡ, ಆರ್.ಆರ್. ನಗರ ವಲಯದಲ್ಲಿ 9 ಕಟ್ಟಡ ಹಾಗೂ ದಾಸರಹಳ್ಳಿ ವಲಯದಲ್ಲಿ 134 ಕಟ್ಟಡಗಳನ್ನು ತೆರವು ಮಾಡಲು ಪಟ್ಟಿ ಮಾಡಲಾಗಿದೆ. ಆದರೆ ಕ್ರಮ ಮಾತ್ರ ಕೈಗೊಂಡಿಲ್ಲ” ಎಂದು ಮೋಹನ್‌ ದಾಸರಿ ಹೇಳಿದರು.

“ನಗರದ ಬಹುತೇಕ ಆಸ್ಪತ್ರೆಗಳು, ಕಮರ್ಷಿಯಲ್ ಬಿಲ್ಡಿಂಗ್ಗಳು, ಉದ್ಯಮಿಗಳು, ರಾಜಕಾರಿಣಿಗಳು ಸೇರಿದಂತೆ ಹಲವು ಪ್ರಭಾವಿಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ. ಇದರ ತೆರವು ಕಾರ್ಯಾಚಾರಣೆ ಮಾತ್ರ ನಡೆದಿಲ್ಲ. ರಾಜಾಜಿನಗರ, ಕೆ.ಆರ್.ಪುರ, ಕೆಂಗೇರಿ, ಆರ್.ಆರ್.ನಗರ, ಹೆಬ್ಬಾಳ, ಯಲಹಂಕ, ಲಗ್ಗೆರೆ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಜಕಾಲುವೆಗಳ ಒತ್ತುವರಿ ಆಗಿದೆ. ಪಾಲಿಕೆ ಅಧಿಕಾರಿಗಳನ್ನು ಕೇಳಿದರೆ, ಸಮೀಕ್ಷೆ ಮಾಡುತ್ತಿದ್ದೇವೆ, ಆದಷ್ಟು ಬೇಗ ವರದಿ ಸಿದ್ದವಾಗುತ್ತದೆ ಎನ್ನುತ್ತಾರೆ. ಆದರೆ ಬಿಬಿಎಂಪಿ ಮುಖ್ಯ ಕಚೇರಿಯ ಕೂಗಳತೆ ದೂರದಲ್ಲಿರುವ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಕೂಡ ಅಧಿಕಾರಿಗಳು ಮುಂದಾಗುತ್ತಿಲ್ಲ” ಎಂದು ಮೋಹನ್‌ ದಾಸರಿ ಹೇಳಿದರು.

“ರಾಜಕಾಲುವೆ ಮೀಸಲು ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿರುವ ಅಪಾರ್ಟ್‍ಮೆಂಟ್‍ಗಳನ್ನು ತೆರವು ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯೂ ಆದೇಶ ನೀಡಿದೆ. ಆದರೆ ತೆರವು ಕಾರ್ಯಾಚರಣೆ ಮಾತ್ರ ಮುಂದುವರೆದಿಲ್ಲ. ಈ ಸಲವೂ ಬಿಬಿಎಂಪಿಯು ಜೋರು ಮಳೆ ಬಿದ್ದಾಗ ಪ್ರವಾಹ ಪರಿಸ್ಥಿತಿ ಉಂಟಾಗುವ 209 ಪ್ರದೇಶಗಳನ್ನು ಗುರುತಿಸಿದೆ. ಪ್ರತಿ ವರ್ಷವೂ ಮಳೆಯಿಂದ ಕೋಟ್ಯಂತರ ರೂ. ಆಸ್ತಿಪಾಸ್ತಿ ನಷ್ಟವಾಗುತ್ತಿದೆ. ಕೆಲವರು ಪ್ರಾಣವನ್ನೂ ಕಳೆದುಕೊಳ್ಳುತ್ತಿದ್ದಾರೆ. ಇಷ್ಟಾದರೂ ಪಾಲಿಕೆಯು ಯುದ್ಧ ಕಾಲದಲ್ಲಿ ಶಸ್ತ್ರಾಸ್ತ್ರ ಅಭ್ಯಾಸ ಎಂಬಂತೆ ಮಳೆಗಾಲ ಶುರುವಾದ ಬಳಿಕ ಕೆಲವೊಂದು ಕಾಮಗಾರಿಗಳನ್ನು ಕೈಗೊಂಡು ಜನರ ಕಣ್ಣೊರೆಸುವ ತಂತ್ರವನ್ನು ಅನುಸರಿಸುತ್ತಲೇ ಬರುತ್ತಿದೆ” ಎಂದು ಮೋಹನ್‌ ದಾಸರಿ ಹೇಳಿದರು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿಮೋಹನ್‌ ದಾಸರಿ
Previous Post

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್ ರಾಜೀನಾಮೆ‌

Next Post

ಕರಿ ಸುಬ್ಬು ಅವರು ಕೆಜಿಎಫ್‌ 2 ಬಗ್ಗೆ ಹೇಳಿದೇನು ಗೊತ್ತಾ? | KGF 2 | PRATIDHVANI NEWS | Pratidhvani

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಕರಿ ಸುಬ್ಬು ಅವರು ಕೆಜಿಎಫ್‌ 2 ಬಗ್ಗೆ ಹೇಳಿದೇನು ಗೊತ್ತಾ? | KGF 2 | PRATIDHVANI NEWS | Pratidhvani

ಕರಿ ಸುಬ್ಬು ಅವರು ಕೆಜಿಎಫ್‌ 2 ಬಗ್ಗೆ ಹೇಳಿದೇನು ಗೊತ್ತಾ? | KGF 2 | PRATIDHVANI NEWS | Pratidhvani

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada