ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ದಿಢೀರ್ ದೆಹಲಿಗೆ ತೆರಳಿದ್ದು, ಸಂಪುಟ ವಿಸ್ತಪರಣೆಯ ಕುರಿತು ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಈ ಕುತೂಹಲಕ್ಕೆಲ್ಲ ಈಗ ತೆರೆ ಬಿದಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಹೌದು, ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತಂತೆ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ನಾಲ್ಕು ವಿಧಾನಪರಿಷತ್ ಸ್ಥಾನಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಕೋರ್ ಕಮಿಟಿ ಪಟ್ಟಿ ನೀಡಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಹೈಕಮಾಂಡ್ ಕೈಗೊಳ್ಳಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದ್ದಾರೆ.