ವಾರಣಾಸಿಯ ಜ್ಞಾನವಾಪಿ ಮಸೀದಿ ಅವರಣದಲ್ಲಿ ‘ಶಿವಲಿಂಗ’ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿ ಅರೆಸ್ಟ್ ಆಗಿದ್ದ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರಿಗೆ ಶನಿವಾರ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.
ತೀಸ್ ಹಜಾರಿ ನ್ಯಾಯಾಲಯದ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಿದ್ಧಾರ್ಥ ಮಲಿಕ್ ಅವರು ಪ್ರೊಫೆಸರ್ ರತನ್ ಲಾಲ್ ಅವರಿಗೆ 50,000 ರೂ. ಬಾಂಡ್ ನೀಡಿದ ಬಳಿಕ ಪ್ರಾಧ್ಯಾಪಕ ಜಾಮೀನಿನ ಮೇಲೆ ಹೊರಬರಬಹುದು ಎಂದಿದೆ.

ನ್ಯಾಯಾಲಯವು, “ಪ್ರಸ್ತುತ ಆರೋಪಿಯು ಯಾವುದೇ ಕ್ರಿಮಿನಲ್ ಆಗದೆ ಉತ್ತಮ ಖ್ಯಾತಿಯನ್ನು ಹೊಂದಿರುವ ವ್ಯಕ್ತಿಯಾಗಿದ್ದು, ಆರೋಪಿಯು ಕಾನೂನಿನ ಹಾದಿಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆಯಿಲ್ಲ. ಹಾಗಾಗಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸುವ ಅಗತ್ಯವಿಲ್ಲ ಎಂದು ಗಮನಿಸಿ ಈ ನಿರ್ಧಾರ ಕೈಗೊಂಡಿದೆ..
ವಕೀಲ ವಿನೀತ್ ಜಿಂದಾಲ್ ಅವರು ತಮ್ಮ ದೂರಿನಲ್ಲಿ, ಲಾಲ್ ಇತ್ತೀ ಚೆಗೆ ‘ಶಿವಲಿಂಗ ಪತ್ತೆ ಕುರಿತಾಗಿ ಪ್ರಚೋದನಕಾರಿ ಟ್ವೀ ಟ್’ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ. ಈ ದೂರಿನ ಅನ್ವಯ ಲಾಲ್ ಅವರ ವಿರುದ್ಧ FIR ದಾಖಲಿಸಿ ಬಂಧಿಸಿದ್ದಾರೆ.



