ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಪಾದರಾಯನಪುರದ ಅಲ್ ಅಜರ್ ಫೌಂಡೇಶನ್ ಶಾಲೆಯಲ್ಲಿ ಇಂದು ಡಾ.ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಬಿಎಂಪಿಯ ಪೌರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಭೋಜನ ಉಣಬಡಿಸಿದ. ದಲಿತ ಮತ್ತು ಇಸ್ಲಾಂ ಧರ್ಮ ಗುರುಗಳ ತಟ್ಟೆಯಿಂದ ಊಟ ತೆಗೆದುಕೊಂಡು ಸ್ವೀಕರಿಸಿ, ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ. ನಮ್ಮೆಲ್ಲರ ಜಾತಿ ಒಂದೇ. ಅದುವೇ ಮನುಷ್ಯ ಜಾತಿಗೆ ಸೇರಿದವರು ಎಂದು ಹೇಳಿದ್ದಾರೆ.
ಮನುಷ್ಯರಾಗಿ ಬಾಳುವುದೇ ನಿಜವಾದ ಧರ್ಮ. ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮ ಎಂದಿಗೂ ಅಡ್ಡಿಯಾಗದು. ನಾವೆಲ್ಲರೂ ಸಹೋದರರಂತೆ ಬಾಳಬೇಕು ಎಂದು ಹೇಳುವ ಮೂಲಕ ಸಹೋದರತ್ವದ ಸಂದೇಶ ಸಾರಿದರು.
ಇದೇ ಸಂದರ್ಭದಲ್ಲಿ ದಲಿತ ಸ್ವಾಮೀಜಿಗೆ ಕೈತುತ್ತು ತಿನ್ನಿಸಿ, ಅವರು ತಿಂದು, ಇದು ಕಣ್ರೀ ಸಹೋದರತ್ವ.. ಬಂಧುತ್ವ ಎಂದು ಸಾಮರಸ್ಯ ಸಹೋದರತೆಯ ತತ್ವವನ್ನು ಸಾರಿದರು.