2019ರಲ್ಲಿ ನಡೆದಿದ್ದ ದಾಳಿ ಸಂಬಂಧ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ಕೋರ್ಟ್ಗೆ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.
ಹೌದು, ಎರಡೂವರೆ ವರ್ಷದ ಬಳಿಕ ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾದ. ಬೆನ್ನಲ್ಲೆ ಡಿಕೆ ಶಿವಕುಮಾರ್, BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ ಎಂದು ಬಿಜೆಪಿ ವಿರುದ್ದ ಆರೋಪಿಸಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಡಿಕೆ ಶಿವಕುಮಾರ್, BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಆರೋಪಿಸಿದ್ದಾರೆ.
ಸಚಿವರೊಬ್ಬರು 40% ಕಮಿಷನ್ ಕೇಳಿದ್ದಕ್ಕೆ ಕಾಂಟ್ರ್ಯಾಕ್ಟರ್ ಆತ್ಮಹತ್ಯೆ ಮಾಡಿಕೊಂಡರು. ರಾಜ್ಯ ಸರ್ಕಾರವು 40% ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘ ಸಾರ್ವಜನಿಕವಾಗಿ ಹೇಳಿದೆ. BJP ಪ್ರಾಯೋಜಿತ PSI ಹಗರಣ ಭೇದಿಸಿದ್ದರಿಂದ ಪೊಲೀಸ್ ನೇಮಕಾತಿ ಸ್ಥಗಿತಗೊಂಡಿದೆ. ಆದರೂ ಯಾರ ಮೇಲೂ ದಾಳಿ ನಡೆದಿಲ್ಲ, ಚಾರ್ಜ್ ಶೀಟ್ ಹಾಕಿಲ್ಲ ಎಂದು ಕಿಡಿಕಾರಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಚಾರ್ಜ್ ಶೀಟ್ ಸಲ್ಲಿಸಿದೆ. ಇನ್ನು ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಈ ಕುರಿತು ನಾನು ಈಗಷ್ಟೇ ಮಾಧ್ಯಮಗಳಿಂದ ತಿಳಿದುಕೊಂಡೆ. ಚಾರ್ಜ್ಶೀಟ್ ಸಲ್ಲಿಕೆಯಾದ ಕುರಿತು ನ್ಯಾಯಾಲಯದವರು ತಮಗೆ ಪ್ರತಿ ಕೊಟ್ಟ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.
ಈ ಹಂತದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದು ಸಮಂಜಸವಲ್ಲ. ಮೊದಲು ಚಾರ್ಜ್ಶೀಟ್ ಸಲ್ಲಿಕೆಯಾದ ಬಗ್ಗೆ ನ್ಯಾಯಾಲಯದಿಂದ ಪ್ರತಿ ಬರಲಿ. ಆಮೇಲೆ ಈ ಕುರಿತು ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಅಲ್ಲದೇ ಕಾನೂನಾತ್ಮಕ ಪ್ರಕ್ರಿಯೆಯ ಬಗ್ಗೆಯೂ ಚಿಂತಿಸಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜಕೀಯವಾಗಿ ಅವರ ಪಕ್ಷದವರನ್ನೇ ಬಿಟ್ಟಿಲ್ಲ, ನಮ್ಮನ್ನು ಬಿಡ್ತಾರಾ? ED ಚಾರ್ಜ್ಶೀಟ್ಗೆ ಡಿಕೆ ಶಿವಕುಮಾರ್ ಕಿಡಿ ಇನ್ನು ಆಗಸ್ಟ್ ತಿಂಗಳ ಬಳಿಕ ತಮಗೆ ತೊಂದರೆ ಎದುರಾಗಬಹುದು ಎಂದು ಈ ಹಿಂದೆ ಹೇಳಿದ್ದ ಡಿಕೆ ಶಿವಕುಮಾರ್, ಸ್ವಲ್ಪ ಬೇಗನೇ ಆರಂಭವಾಗಿದೆಯಾ ಎಂಬ ಪತ್ರಕರ್ತರ ಪ್ರಶ್ನೆಗೆ ಆ ಬಗ್ಗೆ ಈಗೇಕೆ ಮಾತು ಎಂದು ನಸುನಕ್ಕರು.ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಡಿಕೆ ಶಿವಕುಮಾರ್ ಸದ್ಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.