ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಅಸಂಸದೀಯ ಭಾಷೆಯಲ್ಲಿ ಲೇಖನ ಬರೆದಿರುವ ಪಠ್ಯ ಪರಿಷ್ಕರಣಾ ಸಮಿತಿ ಮುಖ್ಯಸ್ಥರಾದ ರೋಹಿತ್ ಚಕ್ರತೀರ್ಥ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡಿ ನಂತರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ನಾವು ಸ್ವಾಮೀಜಿಗಳ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ್ದು ಆದಷ್ಟು ಬೇಗ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
![](https://pratidhvani.com/wp-content/uploads/2022/05/Nirmalanandanatha-Mahaswamiji_800_480-1.jpg)
ಈ ವಿಚಾರವಾಗಿ ಆದಿಚುಂಚನಗಿರಿಯ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದರು. ಸರ್ಕಾರ ಕಾನೂನು ಹಾಗು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಯಾವುದೇ ಕಾರಣಕ್ಕು ಕ್ಷಮಿಸಿಉವುದಿಲ್ಲ ಎಂಬ ಸಂದೇಶವನ್ನು ರವಾನಿಸಬೇಕು ಎಂದಿದ್ದಾರೆ.
ಈ ರೀತಿ ಮಾಡುವುದು ಸರ್ಕಾರದ ನಿರ್ಧಾರವನ್ನ ಗೇಲಿ ಮಾಡಿದಂತಿರುತ್ತದೆ. ರಾಷ್ಟ್ರಕವಿಗಳನ್ನು ನಿಂದಿಸಿ ಅವಹೇಳನಕಾರಿಯಾಗಿ ಬರೆಯಲಾಗಿದೆ. ನಾಡಗೀತೆಗ ಅವಮಾನಿಸಿದರೆ ರಾಷ್ಟ್ರಗೀತೆಗೆ ಅವಮಾನ ಮಾಡಿದಂತೆ. ಇಲ್ಲಿ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿರುವುದು ಗೋಚರವಾಗಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.