ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಜಗ್ಗೇಶ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.
ದೇಶಾದ್ಯಂತ ನಡೆಯುವ 57 ರಾಜ್ಯಸಭಾ ಚುನಾವಣೆಗೆ ಬಿಜೆಪಿ 16 ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ರಾಜ್ಯದ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದೆ.

ಜೂನ್ 10ರಂದು 15 ರಾಜ್ಯಗಳ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಕೇಂದ್ರ ಸಚಿವ ಪಿಯೂಶ್ ಗೋಯೆಲ್ ಮಹಾರಾಷ್ಟ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ರಾಜ್ಯಸಭೆ ಅವಧಿ ಪೂರೈಸಿದ್ದು, ಅವರಿಗೆ ಪಕ್ಷದಿಂದ ಟಿಕೆಟ್ ನೀಡಲಾಗಿಲ್ಲ.