2021ರ ಫೆಬ್ರವರಿಯಲ್ಲಿ ನಡೆದ KAS ಪರೀಕ್ಷೆ ಫಲಿತಾಂಶ ಮೌಲ್ಯಮಾಪನ ವಿಳಂಬ ಖಂಡಿಸಿ ಆಡಳಿತ ಪಕ್ಷ ಬಿಜೆಪಿ ಶಾಸಕ ಸುರೇಶ್ ಕುಮಾರ್ ಮಂಗಳವಾರ ಕರ್ನಾಟಕ ಲೋಕ ಸೇವಾ ಆಯೋಗ ಮುಂಭಾಗ ಅಭ್ಯರ್ಥಿಗಳ ಜೊತೆ ಪ್ರತಿಭಟಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮುಖ್ಯ ಕಾರ್ಯದರ್ಶಿ, KPSC ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ಮೌಲ್ಯಮಾಪನ ಶುರುವಾಗಿರುವ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದೆ ಎಂಬುದರ ಕುರಿತು ತಿಳಿಸಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದಾರೆ.
ಹೀಗೆ ಆದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.







