ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎರಚಿದ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ “ರೈತ ಚಳುವಳಿ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ”ಯಲ್ಲಿ ಭಾಗಿಯಾಗಿದ್ದ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎಸೆಯಲಾಗಿದೆ.
ಕರ್ನಾಟಕ ರೈತ ಮುಖಂಡ ಕೆ.ಚಂದ್ರಶೇಖರ್ ಬೆಂಬಲಿಗರಿಂದ ರೈತ ಮುಖಂಡರಾದ ರಾಕೇಶ್ ಟಿಕಾಯತ್, ಯುಧ್ವೀರ್ ಸಿಂಗ್ ಮೇಲೆ ಕಪ್ಪು ಬಣ್ಣ ಎರಚಲಾಗಿದೆ.
ಇದಲ್ಲದೆ ಸ್ಥಳದಲ್ಲಿ ಜನರು ಒಬ್ಬರ ಮೇಲೆ ಒಬ್ಬರು ಕುರ್ಚಿಗಳನ್ನು ಎಸೆಯುವ ದೃಶ್ಯಗಳು ಕಂಡು ಬಂದಿವೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾಕೇಶ್ ಟಿಕಾಯತ್ ಮತ್ತು ಯುಧವೀರ್, ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಾಧ್ಯಮಗೋಷ್ಠಿಯಲ್ಲಿ ಕೆಲವರು ವಾಗ್ವಾದಕ್ಕಿಳಿದಿದ್ದು, ಕಪ್ಪು ಮಸಿ ಎರಚಿದ್ದಲ್ಲದೆ. ಕುರ್ಚಿಗಳನ್ನು ಮನಬಂದಂತೆ ಎಸೆದ ಘಟನೆಯೂ ನಡೆಯಿತು.






