ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 21 ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ (GST) ಪರಿಹಾರ ಹಣ ಬಿಡುಗಡೆ ಮಾಡಿದೆ.
ಕೇಂದ್ರ ಹಣಕಾಸು ಸಚಿವಾಲಯ ಮಂಗಳವಾರ 21 ರಾಜ್ಯಗಳಿಗೆ 86,912 ಕೋಟಿ ರೂ. ಪರಿಹಾರ ಹಣ ಬಿಡುಗಡೆ ಮಾಡಿದೆ. ಕರ್ನಾಟಕದ ಪಾಲು 8,633 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ.
ಒಟ್ಟಾರೆ ಜಿಎಸ್ಟಿ ಹಣದಲ್ಲಿ ಮಹಾರಾಷ್ಟ್ರಕ್ಕೆ 14,145 ಕೋಟಿ ರೂ. ಹೆಚ್ಚಿನ ಪರಿಹಾರ ನೀಡಲಾಗಿದೆ. ಇನ್ನುಳಿದಂತೆ ತಮಿಳುನಾಡಿಗೆ 9,602 ಕೋಟಿ, ಉತ್ತರ ಪ್ರದೇಶಕ್ಕೆ 8,874 ಕೋಟಿ ಹೊರತುಪಡಿಸಿದರೆ 3ನೇ ಸ್ಥಾನದಲ್ಲಿ ಕರ್ನಾಟಕ ಇದ್ದು 8,633 ಕೋಟಿ ರೂ. ಪರಿಹಾರ ನೀಡಲಾಗಿದೆ.

ಭಾರತದ ಜಿಡಿಪಿ ದರ ಏರಿಕೆಯಾಗಿದ್ದು, 2021-22 ಆರ್ಥಿಕ ವರ್ಷದ ಜಿಡಿಪಿ ದರ ಶೇ.8.7 ರಷ್ಟಿದೆ. ಕ್ವಾರ್ಟರ್ 4ರ ಜಿಡಿಪಿ ದರ ಶೇ.4 ರಷ್ಟಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.
ಜಿಎಸ್ ಟಿ ಹಣ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಧನ್ಯವಾದ ಹೇಳಿದ್ದಾರೆ.