ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ದೀಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 3,712 ಮಂದಿಗೆ ಹೊಸದಾಗಿ ಕರೋನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, , ಕಳೆದ 24 ಗಂಟೆಗಳಲ್ಲಿ 3,712 ಮಂದಿಗೆ ಹೊಸದಾಗಿ ಕರೋನಾ ಸೋಂಕು ದೃಢಪಟ್ಟಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 524641ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,584 ಗುಣಮುಖವಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 19,509. ದೈನಂದಿನ ಪಾಸಿಟಿವಿಟಿ ದರ 0.84% ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.