ಪಾಟಿದಾರ್ ಚಳುವಳಿ ಮೂಲಕ ದೇಶಾದ್ಯಂತ ವ್ಯಾಪಕ ಜನಮನ್ನಣೆ ಗಳಿಸಿದ್ದ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಬಿಜೆಪಿ ಪಕ್ಷಕ್ಕೆ ಗುರುವಾರ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಕಳೆದ ತಿಂಗಳು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಮಾಜಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳಿರುವಂತೆಯೇ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಗುಜರಾತ್ ನ ಗಾಂಧಿನಗರದಲ್ಲಿರುವ ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯ ಮುಖಂಡ ಸಿಆರ್ ಪಾಟೀಲ್ ಅವರ ಸಮ್ಮುಖದಲ್ಲಿ ಹಾರ್ದಿಕ್ ಪಟೇಲ್ ಬಿಜೆಪಿಗೆ ಸೇರ್ಪಡೆಯಾದರು.

ಇಂದು ನಾನು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ, ನಾನು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ, ನಾನು ಯಾವುದೇ ಹುದ್ದೆಗಾಗಿ ಯಾರ ಮುಂದೆಯೂ ಯಾವುದೇ ಬೇಡಿಕೆಗಳನ್ನು ಇಟ್ಟಿಲ್ಲ, ನಾನು ಕೆಲಸ ಮಾಡಲು ಬಿಜೆಪಿಗೆ ಸೇರುತ್ತಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದರು.
ಸೇರ್ಪಡೆಯ ಬಳಿಕ ಮಾತನಾಡಿದ ಹಾರ್ದಿಕ್ ಪಟೇಲ್, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳೊಂದಿಗೆ ಜನರು ಸಂಪರ್ಕ ಹೊಂದುತ್ತಿರುವಾಗ, ನಾನು ಕೂಡ ಅದೇ ರೀತಿ ಮಾಡಬೇಕು. ಪ್ರಧಾನಿ ಮೋದಿ ಇಡೀ ಪ್ರಪಂಚದ ಹೆಮ್ಮ ಗುಜರಾತ್ನಲ್ಲಿ ಕಾಂಗ್ರೆಸ್ ಮುಕ್ತ ಮಾಡುವ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ.







