ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಲಬೆಗೆ ಪ್ರಚೋದನೆ ನೀಡಿದ ಸಂಬಂಧ ಗಟನೆಯ ಮಾಸ್ಟರ್ ಮೈಂಡ್ನನ್ನು ಪೊಲೀಸರು ರಾಜ್ಯ ರಾಜಧಾನಿ ಲಖನೌನಲ್ಲಿ ಬಂಧಿಸಿದ್ದಾರೆ.
ಬಂದಿತ ಆರೋಪಿಯನ್ನು ಹಯಾತ್ ಝಫರ್ ಹಶ್ಮಿ ಎಂದು ಗುರುತಿಸಲಾಗಿದೆ. ಆರೋಪಿ ಘಟನೆ ನಡೆದ ನಂತರ ತಲೆಮಾರಿಸಿಕೊಂಡಿದ್ದ ಆರೋಪಿಯು ಲಖನೌನ ಯೂಟ್ಯೂಬ್ ಚಾನಲ್ ಆಫೀಸ್ ಒಂದರಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾನ್ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗು ಒಟ್ಟು 500ಕ್ಕು ಹೆಚ್ಚು ಜನರನ್ನು ಬಂಧಿಸಲಾಗಿದ್ದು ಮೂರು FIRಗಳನ್ನು ದಾಖಲಿಸಲಾಗಿದೆ. ಮುಖ್ಯ ಆರೋಪಿಯು ನಿಷೇಧಿತ PFI ಸಂಘಟನೆಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ತಿಳಿದು ಬಂದಿದೆ.













