• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಖಾಸಗಿ ಪಿಯು ಕಾಲೇಜಿನಲ್ಲಿ ಇಂಟಿಗ್ರೇಟೆಡ್‌ ಕೋಚಿಂಗ್‌ ಬ್ಯಾನ್ : PU ಬೋರ್ಡ್ ನಿಂದ ಮಹತ್ವದ ನಿರ್ಧಾರ !

ಕರ್ಣ by ಕರ್ಣ
June 8, 2022
in ಕರ್ನಾಟಕ
0
ಖಾಸಗಿ ಪಿಯು ಕಾಲೇಜಿನಲ್ಲಿ ಇಂಟಿಗ್ರೇಟೆಡ್‌ ಕೋಚಿಂಗ್‌ ಬ್ಯಾನ್ : PU ಬೋರ್ಡ್ ನಿಂದ ಮಹತ್ವದ ನಿರ್ಧಾರ !
Share on WhatsAppShare on FacebookShare on Telegram

ಪಿಯುಸಿಗೆ ಬಂದ್ಮೇಲೆ ಮಕ್ಕಳಿಗೆ ಯಾವ್ದಾದ್ರೂ ಕೋಚಿಂಗ್ ಕ್ಲಾಸ್ ಗೆ ಸೇರಬೇಕೆನ್ನುವ ಆಸೆ. ಅದಕ್ಕಾಗಿಯೇ ತರಗತಿಯ ಪಠ್ಯದ ಜೊತೆಗೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೇರೋದು ಮಾಮೂಲಿ. ಆದರೆ ಇದನ್ನೇ ನೆಪಮಾಡಿಕೊಂಡು ಕೆಲ ಶಿಕ್ಷಣ ಸಂಸ್ಥೆಗಳು ಲಕ್ಷ ಲಕ್ಷ ಶುಲ್ಕ ವಸೂಲಿ ಮಾಡೋದೇನು ಹೊಸದೇನಲ್ಲ. ಹೀಗಾಗಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಇದ್ದಕ್ಕೆ ಕಡಿವಾಣ ಹಾಕಲು ದಿಟ್ಟ ಹೆಜ್ಜೆಯೊಂದನ್ನು ಇಟ್ಟಿದೆ.

ADVERTISEMENT

ಪಠ್ಯದ ಜೊತೆ ನೀಟ್‌, ಜೆಇಇ ಮತ್ತು ಸಿಇಟಿಗೆ ತರಬೇತಿ ನೀಡುವ ಇಂಟೆಗ್ರೇಟೆಡ್‌ ಕೋಚಿಂಗ್‌ ವ್ಯವಸ್ಥೆಯನ್ನು ಬಹುತೇಕ ಖಾಸಗಿ ಕಾಲೇಜುಗಳಲ್ಲಿ ಅಳವಡಿಸಿಕೊಳ್ಳಲಾಗಿದೆ. ಕೆಲವು ಕಾಲೇಜುಗಳು ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡಿವೆ. ಈ ಸಂಸ್ಥೆಗಳ ಬೋಧಕರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಾರೆ. ಇತ್ತೀಚೆಗೆ ಕೆಲವು ಕಾಲೇಜುಗಳಲ್ಲಿ ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ನೀಡುವುದಾಗಿ ವಿದ್ಯಾರ್ಥಿಗಳ ಮನವೊಲಿಸಿ ಹಣ ಕೀಳುತ್ತಾರೆ ಎನ್ನುವ ಆರೋಪಗಳೂ ಮುನ್ನಲೆಗೆ ಬಂದಿತ್ತು. ಹೀಗಾಗಿ ಕೋಚಿಂಗ್ ಕೋರ್ಸ್ ವಿಷಯಕ್ಕೆ ಸಂಬಂಧಿಸಿದಂತೆ ಪಿಯು ಬೋರ್ಡ್ ಮಹತ್ವದ ಆದೇಶವೊಂದನ್ನ ಹೊರಡಿಸಿದೆ.

ನಿಯಮ ಮೀರಿದ್ರೆ ಕಾಲೇಜಿನ ಮಾನ್ಯತೆ ರದ್ದುಗೊಳಿಸುವ ಎಚ್ಚರಿಕೆ !

ಹೌದು, ಕೋಚಿಂಗ್ ವ್ಯವಸ್ಥೆ ಪದ್ಧತಿ ಜಾರಿಗೊಳಿಸುವ ಮೂಲಕ ವಿದ್ಯಾರ್ಥಿಗಳಿಂದ ದುಬಾರಿ ಶುಲ್ಕ ಪಡೆಯಲಾಗುತ್ತಿದೆ. ಹೀಗಾಗಿ ಇಂಟೆಗ್ರೇಟೆಡ್‌ ಕೋಚಿಂಗ್‌ಗೆ ಅವಕಾಶ ಇಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿಯಮಾವಳಿ ರೂಪಿಸಿದೆ. ಆದರೆ, ಈ ನಿಯಮಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ ಎಂಬ ಗುಮಾನಿಯೂ ಹರಿದಾಡ್ತಿದೆ. ಇಂಟೆಗ್ರೇಟೆಡ್‌ ಕೋಚಿಂಗ್‌ ಇರುವ ಕಾಲೇಜುಗಳಲ್ಲಿ ವರ್ಷಕ್ಕೆ 1.25 ಲಕ್ಷದಿಂದ 3 ಲಕ್ಷದವರೆಗೆ ವಿದ್ಯಾರ್ಥಿಗಳಿಂದ ವಸೂಲಿ ಮಾಡಲಾಗುತ್ತಿದೆ. ಇದು ವಿವಿಧ ಪರೀಕ್ಷೆಗಳ ಅನುಸಾರ ಪ್ಯಾಕೇಜ್‌ ರೂಪದಲ್ಲಿ ಶುಲ್ಕ ಪಡೆಯಲಾಗುತ್ತದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. 

ಗೈಡ್ ಲೈನ್ಸ್ ನಲ್ಲಿ‌ ಏನೇನಿದೆ..?

– ಪಿಯು ಕಾಲೇಜುಗಳಲ್ಲಿ ಸಿಇಟಿ, ಜೆಇಇ, ನೀಟ್, ಇಂಟೆಗ್ರೆಟೆಡ್‌ ಕೋರ್ಸ್‌, ಬ್ರಿಡ್ಜ್‌ ಕೋರ್ಸ್‌ ಇತ್ಯಾದಿ ಹೆಸರಿನಲ್ಲಿ ಕಾನೂನು ಬದ್ಧವಾಗಿ ನಿಗದಿಪಡಿಸಿದ ಶುಲ್ಕ ಮಾತ್ರ ಸ್ವೀಕರಿಸಬೇಕು.

– ಇತರೆ ಸಂಘ ಸಂಸ್ಥೆ ಅಥವಾ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸೇರಿ ಬೋಧನೆ ಮಾಡುವುದು ಕಂಡು ಬಂದಲ್ಲಿ ಕಾಲೇಜಿನ ಮಾನ್ಯತೆ ರದ್ದು

– ಈ ಸಂಸ್ಥೆಗಳ ಪ್ರಾಂಶುಪಾಲರ ಮತ್ತು ಆಡಳಿತ ಮಂಡಳಿಯ ಮೇಲೆ ಕಾನೂನು ಕ್ರಮ

– ನಿಗದಿಪಡಿಸಿದ ಪಠ್ಯಕ್ರಮವನ್ನು ಹೊರತುಪಡಿಸಿ ಇತರೆ ಯಾವುದೇ ಪಠ್ಯಕ್ರಮ ಬೋಧಿಸಬಾರದು

– ಇದರ ಹೊರತಾಗಿಯೂ ಪಠ್ಯೇತರ ಬೋಧನೆ ಕಂಡು ಬಂದರೆ ಸಂಸ್ಥೆಯ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯ ಮೇಲೆ ಕಾನೂನು ಕ್ರಮ

– ಪರಸ್ಪರ ವಿನಿಯಮದೊಂದಿಗೆ ಆ ಸಂಸ್ಥೆಯ ಹೆಸರನ್ನು ತಮ್ಮ ಕಾಲೇಜಿನ ಜತೆ ಬಳಕೆ ಮಾಡಿ ಯಾವುದೇ ರೀತಿ ಶೈಕ್ಷಣಿಕ ಚಟುವಟಿಕೆ ನಡೆಸುವಂತಿಲ್ಲ

– ಬೇರೆ ಪಠ್ಯ ವಸ್ತುವನ್ನು ಖರೀದಿಸಲು ವಿದ್ಯಾರ್ಥಿಗಳಿಗೆ ಅಥವಾ ಪೋಷಕರಿಗೆ ಒತ್ತಡ ಹೇರುವಂತಿಲ್ಲ

ಒಟ್ಟಾರೆ ಲಂಗು ಲಗಾಮಿಲ್ಲದೆ ಕೋಚಿಂಗ್ ಹೆಸರಿನಲ್ಲಿ ದುಡ್ಡು ಮಾಡ್ತಿದ್ದ ಕೆಲ ಖಾಸಗಿ ಪಿಯು ಕಾಲೇಜುಗಳಿಗೆ ಸರ್ಕಾರ ಮೂಗುದಾರ ಹಾಕಿದೆ. ಆದರೆ ನಿಯಮ ಮೀರಿದ ಕಾಲೇಜುಗಳ ವಿರುದ್ಧ ಮುಂದಿನ ದಿನಗಳಲ್ಲಿ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತೆ ಅಂತ ಕಾದು ನೋಡ್ಬೇಕಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಫ್ಯಾಸಿಷ್ಟರು ಪುಂಡರನ್ನೆ ಏಕೆ ಮುನ್ನೆಲೆಗೆ ತರುತ್ತಾರೆ?

Next Post

ಭಾರತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ʼಪ್ರವಾದಿ ನಿಂದನೆʼ: ಮೋದಿ ವಿರುದ್ಧ ಬಲಪಂಥೀಯರಿಂದಲೇ ಅಭಿಯಾನ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಭಾರತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ʼಪ್ರವಾದಿ ನಿಂದನೆʼ: ಮೋದಿ ವಿರುದ್ಧ ಬಲಪಂಥೀಯರಿಂದಲೇ ಅಭಿಯಾನ

ಭಾರತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ʼಪ್ರವಾದಿ ನಿಂದನೆʼ: ಮೋದಿ ವಿರುದ್ಧ ಬಲಪಂಥೀಯರಿಂದಲೇ ಅಭಿಯಾನ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada