ಜೂನ್ 13 ಅಂದರೆ ನಾಳೆ ಸೋಮವಾದಂದು ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿಶೇಷ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಲಾಗಿದೆ.
ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತಚಲಾಯಿಸಲಿರುವ ಮತದಾರರಿಗೆ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ವಿಜಯಪುರ, ಬಾಗಲಕೋಟೆ , ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ , ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗಳು ನಡೆಯುತ್ತಿದ್ದು ಮತದಾನದ ಅನೂಕೂಲಕ್ಕಾಗಿ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.






