ಉತ್ತರ ಭಾರತದ ಕೆಲೆವೆಡೆ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು ಬಿಸಿಲಿನ ಬೇಗೆಗ ಜನರ ಬಳಲಿ ಬೆಂಡಾಗಿ ಹೋಗಿದ್ದಾರೆ. ಕೆಲ ಕಡೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗು ಮಧ್ಯಾಹ್ನದ ವೇಳೆ ಮನೆಯಿಂದ ಹೊರಬಾರದಂತೆ ಸೂಚಿಸಲಾಗಿದೆ.
ಇನ್ನು ಇದಕ್ಕೆ ಪೂರವೆಂಬಂತೆ ಪಶ್ಚಿಮ ಬಂಗಾಳದ ಉತ್ತರ24ಪರಗಣ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮೂವರು ಬಿಸಿಲಿನ ತಾಪ ತಡೆಯಲಾಗದೆ ಪ್ರಾಣ ಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪಾನೀಹಾಟಿ ಪ್ರದೇಶದಲ್ಲಿ ಇಸ್ಕಾನ್ ವತಿಯಿಂದ ಆಯೋಜಿಸಲಾಗಿದ್ದ ದಂಡ ಮಹೋತ್ಸವದಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಹಿರಿಯ ಸರ್ಕಾರಿ ಅಧಿಕಾರಿಗಳು ಧಾವಿಸಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ತೀವ್ರ ತಾಪಮಾನ ಏರಿಕೆ ಹಾಗು ಜನಸಂಧನಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಮೂವರು ಭಕ್ತರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಧ್ರುವ್ ಜ್ಯೋತಿ ದೇವ್ ತಿಳಿಸಿದ್ದಾರೆ.