ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮ ಪ್ರವಾದಿ ಮೊಹಮ್ಮದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದೇಶಾದ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದ್ದು ಈ ಮಧ್ಯೆ ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ನೂಪುರ್ ಪ್ರತಿಕೃತಿಯನ್ನು ನಡುರಸ್ತೆಯಲ್ಲಿ ನೇಣು ಹಾಕಿದ ರೀತಿಯಲ್ಲಿ ನೇತು ಹಾಕಲಾಗಿತ್ತು.
ಇದಕ್ಕೆ ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯರು ಕಿಡಿಕಾರಿ ಪ್ರತಿಭಟಿಸಿದ್ದರು. ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಮಾರ್ಕೆಟ್ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದರು.
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ನಗರದ ನಿವಾಸಿಗಳಾದ ಮೊಹಮ್ಮದ್ ಶೋಯೆಬ್, ಅಮನ್ ಮೊಕಾಶಿ, ಅರ್ಬಾಜ್ ಮೊಕಾಶಿಯನ್ನು ಶಾಂತಿ ಸುವ್ಯವಸ್ಥೆ ಕದಡಿದ ಆರೋಪದ ಮೇಲೆ ವಶಕ್ಕೆ ಪಡೆದಿದ್ದಾರೆ.