• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ : ಸಚಿವ ಸುಧಾಕರ್

Any Mind by Any Mind
June 13, 2022
in ಕರ್ನಾಟಕ
0
ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ : ಸಚಿವ ಸುಧಾಕರ್
Share on WhatsAppShare on FacebookShare on Telegram

ಬೆಂಗಳೂರು: ದೇಶದ ಕಟ್ಟಕಡೆಯ ವ್ಯಕ್ತಿಗೂ ಸಮರ್ಪಕ ಆರೋಗ್ಯ ಸೇವೆ ನೀಡುವ ಗುರಿಯುಳ್ಳ `ಆಯುಷ್ಮಾನ್ ಭಾರತ ಡಿಜಿಟಲ್ ಮಿಶನ್’ (ಎಬಿಡಿಎಂ) ಕಾರ್ಯಕ್ರಮ ಜಾಗತಿಕ ಮಟ್ಟದ ಅತ್ಯಂತ ದೊಡ್ಡ ಉಪಕ್ರಮವಾಗಿದೆ. ಇದು ಆರೋಗ್ಯ ಕ್ಷೇತ್ರದಲ್ಲಿರುವ ಕಂದಕಗಳನ್ನು ಮುಚ್ಚಿ, ಸುಸ್ಥಿರ ಮಾದರಿ ಆರೋಗ್ಯ ವ್ಯವಸ್ಥೆಯನ್ನು ಸೃಷ್ಟಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ADVERTISEMENT

ನಾಸ್ಕಾಂ ಸೋಮವಾರ ಇಲ್ಲಿ ಏರ್ಪಡಿಸಿದ್ದಆಯುಷ್ಮಾನ್ ಭಾರತ ಡಿಜಿಟಲ್ ಮಿಷನ್’ ಸಮಾವೇಶದಲ್ಲಿ ಮಾತನಾಡಿದ ಅವರು,ಬೆಂಗಳೂರೊಂದರಲ್ಲೇ ಆರೋಗ್ಯ ಕ್ಷೇತ್ರಕ್ಕೆ ಸಂಬಂಧೀಸಿದ 7,500 ನವೋದ್ಯಮಗಳಿವೆ. ತಂತ್ರಜ್ಞಾನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ ರಾಜ್ಯವಾಗಿದೆ’ ಎಂದರು.

ರಾಜ್ಯದ ಆರೋಗ್ಯ ಸೇವೆಗಳ ಮಾಹಿತಿ, ಮಾನವ ಸಂಪನ್ಮೂಲ ವ್ಯವಸ್ಥೆ ಸಹಿತ ಆರೋಗ್ಯ ವಲಯದ ಸಮಗ್ರ ಮಾಹಿತಿಗಳನ್ನು ಕ್ರೋಡೀಕರಿಸಲಾಗುತ್ತಿದೆ. ಆ ಮೂಲಕ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ಇದಕ್ಕೆ ಪೂರಕವಾಗಿ ಆಂಬುಲೆನ್ಸ್ ಸೇವೆಯನ್ನು ಇನ್ನೊಂದು ತಿಂಗಳಲ್ಲಿ ಸಮಗ್ರವಾಗಿ ಬದಲಾಯಿಸಲಾಗುತ್ತಿದೆ. ರೋಗಿಗಳನ್ನು ಯಾವ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೆಂಬ ಮಾಹಿತಿಯನ್ನು ಆಂಬುಲೆನ್ಸ್ ಚಾಲಕರಿಗೆ ಟೆಲಿಕಾಲ್ ಮೂಲಕ ಒದಗಿಸಲಾಗುವುದು. ಇದರಿಂದ ವಿಂಳಂಬವಿಲ್ಲದೆ ಅಗತ್ಯವಿರುವ ಚಿಕಿತ್ಸೆ ದೊರಕಿಸಲು ಸಾಧ್ಯ’ ಎಂದರು.

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಯೋಜನೆಯಡಿ ಪ್ರತಿಯೊಬ್ಬ ಅರ್ಹರಿಗೂ ಒಂದು ಗುರುತಿನ ಸಂಖ್ಯೆ ನೀಡಲಾಗುವುದು. ಜತೆಗೆ, ಸರ್ಜನ್ ಮಟ್ಟದ ಪರಿಣತ ವೈದ್ಯರಿಂದ ಹಿಡಿದು ಸಾಮಾನ್ಯ ವೈದ್ಯರವರೆಗೂ ಸಮಗ್ರ ದತ್ತಾಂಶ ಸಂಗ್ರಹಿಸಲಾಗುವುದು. ಈ ಮೂಲಕ, ಆರೋಗ್ಯ ಕ್ಷೇತ್ರವನ್ನು ಕಾಡುತ್ತಿರುವ ನಕಲಿ ವೈದ್ಯರ ಸಮಸ್ಯೆಗೂ ತೆರೆ ಬೀಳಲಿದೆ ಎಂದು ಅವರು ನುಡಿದರು.

ಕೊರೋನಾ ನಂತರ, ಆರೋಗ್ಯ ಕ್ಷೇತ್ರದ ಚಹರೆಗಳೇ ಬದಲಾಗಿವೆ. ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಇ-ಮಾನಸ್ ವ್ಯವಸ್ಥೆಯ ಮೂಲಕ 25 ಲಕ್ಷಕ್ಕೂ ಹೆಚ್ಚು ಜನರಿಗೆ ಕೌನ್ಸೆಲಿಂಗ್ ನೆರವು ಒದಗಿಸಲಾಗಿದೆ. ಇದನ್ನು ಕೇಂದ್ರ ಸರಕಾರ ಕೂಡ ಶ್ಲಾಘಿಸಿ, ಇತರೆ ರಾಜ್ಯಗಳಿಗೂ ಯೋಜನೆ ವಿಸ್ತರಿಸುವ ನಿರ್ಣಯವನ್ನು ಕೈಗೊಂಡಿದೆ. ಹಾಗೆಯೇ ಟೆಲಿ ಐಸಿಯು, ಟೆಲಿ ಮೆಡಿಸನ್ ನಂತಹ ಕ್ರಮಗಳ ಮೂಲಕ ರಾಜ್ಯದ ಎಲ್ಲಾ ಭಾಗಗಳ ರೋಗಿಗಳಿಗೆ ಏಕರೂಪದ ಗುಣಮಟ್ಟದ ಚಿಕಿತ್ಸೆ ನೀಡಲಾಯಿತು ಎಂದು ವಿವರಿಸಿದರು.

ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಖಾಸಗಿ ಆಸ್ಪತ್ರೆಗಳ ಪಾತ್ರವೂ ಮಹತ್ವದ್ದಾಗಿದೆ. ದೇಶದಲ್ಲಿ ಶೇಕಡ 50ಕ್ಕಿಂತಲೂ ಹೆಚ್ಚಿನ ಜನರು ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದಾರೆ. ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಎಲ್ಲ ಮಾಹಿತಿಗಳನ್ನೂ ತೆಗೆದುಕೊಳ್ಳುತ್ತವೆ. ಆ ಮಾಹಿತಿಯನ್ನು ಸರಕಾರಗಳೊಂದಿಗೆ ಹಂಚಿಕೊಳ್ಳುತ್ತಿಲ್ಲ. ಈ ಮನೋಭಾವ ಬದಲಾಗಬೇಕು ಎಂದರು.

ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿನ ರೋಗಿಗಳ ಮಾಹಿತಿ ಹಂಚಿಕೊಂಡರೆ, ಸುಗಮ ಆರೋಗ್ಯ ಸೇವೆ ಒದಗಿಸಲು ಬೇಕಾಗಿರುವ ಸೂಕ್ತ ವ್ಯವಸ್ಥೆಯನ್ನು ರೂಪಿಸಬಹುದು. ಈ ನಿಟ್ಟಿನಲ್ಲಿ, ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಕಾರ್ಯಕ್ರಮದ ಭಾಗವಾಗಿ ಖಾಸಗಿ ಆಸ್ಪತ್ರೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳುವುದು ಅವಶ್ಯವಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಎಸ್ಟೋನಿಯಾ ಮತ್ತು ಇಸ್ರೇಲಿನಂತಹ ಸಣ್ಣಪುಟ್ಟ ದೇಶಗಳು ಕೂಡ ಡಿಜಿಟಲ್ ಆರೋಗ್ಯ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿವೆ. ಅಪಾರ ಜನಸಂಖ್ಯೆ ಹೊಂದಿರುವ ಭಾರತದಲ್ಲೂ ಇಂತಹ ಕ್ರಮ ಬರಬೇಕಾಗಿದೆ. ಪ್ರಧಾನಿ ಮೋದಿಯವರು ಜಾರಿಗೆ ತಂದಿರುವ ಎಬಿಎಆರ್ ಕೆ ಯೋಜನೆ ಮೂಲಕ 50 ಕೋಟಿ ಜನರಿಗೆ ತಲಾ 5 ಲಕ್ಷ ರೂ.ವರೆಗೂ ವೈದ್ಯಕೀಯ ವೆಚ್ಚವನ್ನು ಭರಿಸಲಾಗುತ್ತಿದೆ. ಆರೋಗ್ಯವಲಯದ ಸುಧಾರಣೆ ನಿಟ್ಟಿನಲ್ಲಿ ಇಂತಹ ಕ್ರಮಗಳು ಮುಖ್ಯ ಎಂದು ಸಚಿವ ಸುಧಾಕರ್ ಪ್ರತಿಪಾದಿಸಿದರು.

ಟೆಲಿ ಮೆಡಿಸಿನ್, ಟೆಲಿ ರೇಡಿಯಾಲಜಿ, ಇ-ಸಂಜೀವಿನಿ, ಟೆಲಿ-ಸಮಾಲೋಚನೆ ಮುಂತಾದ ವ್ಯವಸ್ಥೆಗಳ ಮೂಲಕ ರಾಜ್ಯದ ಲಕ್ಷಾಂತರ ಜನರಿಗೆ ಆರೋಗ್ಯ ಸೇವೆಗಳನ್ನು ಒದಗಿಸಲಾಗಿದೆ. ಈ ವಿಚಾರದಲ್ಲಿ ರಾಜ್ಯವು ಇಡೀ ದೇಶಕ್ಕೇ ಮೊದಲ, ಮುಂಚೂಣಿ ಸ್ಥಾನದಲ್ಲಿದೆ.

ಕೋವಿಡ್ ಲಸಿಕೆ ಪಡೆದವರಿಗೆ ಭಾರತದಲ್ಲಿ ಡಿಜಿಟಲ್ ಸರ್ಟಿಫಿಕೇಟ್ ನೀಡಲಾಗುತ್ತಿದೆ. ಆ ಮೂಲಕ ಭಾರತವು ಇತರೆ ರಾಷ್ಟ್ರಗಳಿಗೆ ಮಾದರಿಯಾಗಿದೆ. ಅಮೆರಿಕಾದಂತಹ ರಾಷ್ಟ್ರದಲ್ಲಿ ಡಿಜಿಟಲ್ ಸರ್ಟಿಫಿಕೇಟ್ ನೀಡುವ ವ್ಯವಸ್ಥೆ ಇಲ್ಲಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ನಾಸ್ಕಾಂ ಮುಖ್ಯಸ್ಥೆ ದೇಬಜಾನಿ ಘೋಷ್, ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ ಡಾ.ಆರ್.ಎಸ್. ಶರ್ಮಾ, ಉಪಾಧ್ಯಕ್ಷ ಡಾ.ಪ್ರವೀಣ್ ಖೇತಂ, ರಾಜ್ಯ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್, ಆಯಕ್ತರಾದ ರಂದೀಪ್ ಮುಂತಾದವರು ಉಪಸ್ಥಿತರಿದ್ದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ನಾವೇನು ಬಿಜೆಪಿಯವರ ತರ ಜನರ ದಾರಿ ತಪ್ಪಿಸುತ್ತಿಲ್ಲ : ಬಿ.ವಿ.ಶ್ರೀನಿವಾಸ್

Next Post

ತೀವ್ರ ಕುಸಿತದ ಹಾದಿಯಲ್ಲಿ ಷೇರುಪೇಟೆ! ಹೂಡಿಕೆಗಿದು ಸಕಾಲವೇ?

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ತೀವ್ರ ಕುಸಿತದ ಹಾದಿಯಲ್ಲಿ ಷೇರುಪೇಟೆ! ಹೂಡಿಕೆಗಿದು ಸಕಾಲವೇ?

ತೀವ್ರ ಕುಸಿತದ ಹಾದಿಯಲ್ಲಿ ಷೇರುಪೇಟೆ! ಹೂಡಿಕೆಗಿದು ಸಕಾಲವೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada