ಬೆಂಗಳೂರು-ಪಿ.ಎಂ.ಎ.ವೈ. ನಗರ ಯೋಜನೆಯಡಿ ಕೆಂಗೇರಿ ಹೋಬಳಿ ಮಾಳಗೊಂಡನಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ 306 ಮನೆಗಳ ಶಂಕುಸ್ಥಾಪನೆಯನ್ನು ವಸತಿ ಸಚಿವ ವಿ.ಸೋಮಣ್ಣ ನೆರವೇರಿಸಿದರು.
ಬೆಂಗಳೂರು ತೀವ್ರ ವೇಗದಲ್ಲಿ ಬೆಳೆಯುತ್ತಿರುವ ನಗರ. ಹೀಗಾಗಿ ಇಲ್ಲಿ ಸ್ವಂತ ಸೂರನ್ನು ಹೊಂದಬೇಕೆಂಬ ಮಧ್ಯಮ ಮತ್ತು ಬಡವರ್ಗದ ಜನರ ಕನಸು ನನಸಾಗಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಇಲ್ಲಿ 3೦೦ಕ್ಕೂ ಅಧಿಕ ಮನೆಗಳನ್ನು ನಿರ್ಮಾಣದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ.
ಇನ್ನು ಇದೇ 20 ರಂದು ಪ್ರಧಾನಿ ಮೋದಿ ಅವರು ಗೋವಿಂದರಾಜನಗರ ಮತಕ್ಷೇತ್ರದಲ್ಲಿರುವ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಹಾಗೂ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳು ಭರದಿಂದ ಸಾಗಿವೆ ಎಂದರು.
ಈ ಸಂದರ್ಭದಲ್ಲಿ, ಸಮತಾ ಸೈನಿಕ ದಳದ ವೆಂಕಟಸ್ವಾಮಿ, ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಆಯುಕ್ತರಾದ ಬಿ. ವೆಂಕಟೇಶ್, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮಂಗಳಮುಖಿಯರು ಉಪಸ್ಥಿತರಿದ್ದರು.