ವಿಧಾನ ಪರಿಷತ್ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು ಹಾಗೂ ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ನಡೆದ ಚುನಾವಣೆಯ ಮತಗಳ ಎಣಿಕೆ ಬುಧವಾರ ಅಂದರೆ ಇಂದು ಬೆಳಿಗ್ಗೆ 8ಕ್ಕೆ ಆರಂಭವಾಗಿದೆ.
ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಮತಪತ್ರದಲ್ಲಿ ಚುನಾವಣೆ ನಡೆದಿದ್ದು, ಪ್ರಾಶಸ್ತ್ಯದ ಮತಗಳನ್ನೂ ಎಣಿಕೆ ಮಾಡಬೇಕಾಗಿರುವುದರಿಂದ ಬುಧವಾರ ತಡರಾತ್ರಿ ಹೊತ್ತಿಗೆ ಪೂರ್ಣ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಮತ ಎಣಿಕೆಯ ಜಾಗದಿಂದ ಸುತ್ತ ಮುತ್ತು ಎಲ್ಲಾ ಮದ್ಯಪಾನ ಅಂಗಡಿಗಳನ್ನು ನಿಷೇಧಿಸಲಾಗಿದೆ.