• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜಭವನ ಮುತ್ತಿಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಪ್ರತಿಧ್ವನಿ by ಪ್ರತಿಧ್ವನಿ
June 16, 2022
in ಕರ್ನಾಟಕ, ರಾಜಕೀಯ
0
ರಾಜಭವನ ಮುತ್ತಿಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
Share on WhatsAppShare on FacebookShare on Telegram

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಸಂಬಂಧ ಕಾರಿ ನಿರ್ದೇಸನಾಲಯದ ವಿಚಾರಣೆ ಎದುರಿಸುತ್ತಿರುವ ರಾಹುಲ್ ಗಾಂಧಿ ಹಾಗು ಸೋನಿಯಾ ಗಾಂಧಿ ಪರ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ಗುರುವಾರ ಕರ್ನಾಟಕ ಕಾಂಗ್ರೆಸ್ ವತಿಯಿಂದ ರಾಜಭವನ ಮುತ್ತಿಗೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಹೊರಟ ಮೆರವಣಿಗೆಯನ್ನ ಇಂಡಿಯನ್ ಎಕ್ಸ್ಪ್ರೆಸ್ ವೃತ್ತದಲ್ಲಿ ತಡೆದ ಪೊಲೀಸರ ಹಾಗು ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ನಡೆಯಿತ್ತು.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ನಿಂತ ಸ್ಥಳದಲ್ಲೇ ಸರ್ಕಾರ ಹಾಗು ಪೊಲೀಸರ ವಿರುದ್ದ ಪ್ರತಿಭಟನೆ ಶುರು ಮಾಡಿದ್ದರು.

ಎಲ್ಲರನ್ನು ವಶಕ್ಕೆ ಪಡೆದ ಪೊಲೀಸರು ನಗರದ ವಿವಿಧ ಠಾಣೆಗಳಿಗೆ ಕರೆದೊಯ್ದು ನಂತರ ಬಿಟ್ಟು ಕಳುಹಿಸಿದ್ದಾರೆ.

ಈ ವೇಳ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರದ ಬಿಜೆಪಿ ಸರ್ಕಾರ ನಮ್ಮ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಹಣಕಾಸು ಅವ್ಯವಹಾರದ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ನಮ್ಮ ನಾಯಕರಿಗೆ ಮಾನಸಿಕ ಕಿರುಕುಳ ನೀಡುತ್ತಿದೆ. ನಾವೆಲ್ಲರೂ ಈ ಸಂದರ್ಭದಲ್ಲಿ ಅವರ ಬೆನ್ನಿಗೆ ನಿಲ್ಲಬೇಕಾಗಿದೆ ಎಂದು ಹೇಳಿದ್ದಾರೆ.

ತನಿಖೆ ಮಾಡಲು ನಮ್ಮ ವಿರೋಧ ಇಲ್ಲ. ಆದರೆ ದುರುದ್ದೇಶದಿಂದ ಷಡ್ಯಂತ್ರ ರೂಪಿಸಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವರ್ಚಸ್ಸು ಹಾಳು ಮಾಡಲು ಸುಳ್ಳು ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಬೇಕು. ಪೊಲೀಸರು ತಡೆಯಬಹುದು. ಯಾರೂ ಎದೆಗುಂದುವ ಅಗತ್ಯವಿಲ್ಲ. ಪೊಲೀಸರು ಬಂಧಿಸಲಿ, ಜೈಲಿಗೆ ಹಾಕಲಿ ನೀವೆಲ್ಲರೂ ಗಟ್ಟಿಯಾಗಿ ನಿಲ್ಲಿ. ನೀವು ಧೈರ್ಯವಾಗಿರಿ. ನಾಳೆ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಎಲ್ಲ ಶಾಸಕರು, ಪದಾಧಿಕಾರಿಗಳು, ಸಂಸದರು ನಿಮ್ಮ ಜಿಲ್ಲೆಗೆ ಹೋಗಿ ಅಲ್ಲಿ ಪ್ರತಿಭಟನೆ ಮಾಡಿ. ಕಾಂಗ್ರೆಸ್ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಪ್ರತಿಭಟನೆಯ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇಶದಲ್ಲಿ ಆಗುತ್ತಿರುವ ಅನ್ಯಾಯ, ಪ್ರಜಾಪ್ರಭುತ್ವದ ಕಗ್ಗೊಲೆ, ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನೀತಿ ಖಂಡಿಸಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆದಿದೆ. ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಿ, ಮಾನಸಿಕ ಕಿರುಕುಳ ನೀಡಿ, ಬಂಧಿಸಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಮ್ಮ ನಾಯಕರು ದೇಶವನ್ನು ಒಗ್ಗೂಡಿಸಲು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ‘ಭಾರತ ಜೋಡೋ’ ಪಾದಯಾತ್ರೆಯನ್ನು ಘೋಷಿಸಿದ ನಂತರ, ಅವರ ಯಾತ್ರೆ ಯಶಸ್ವಿಯಾಗಿ ಅವರ ಖ್ಯಾತಿ ಎಲ್ಲಿ ಹೆಚ್ಚುತ್ತದೆಯೋ, ಎಲ್ಲಿ ನಮ್ಮ ಸರ್ಕಾರ ಅಪಾಯಕ್ಕೆ ಸಿಲುಕುತ್ತದೆಯೋ ಎಂದು ಭಯಭೀತರಾಗಿ ಕೇಂದ್ರ ಸರಕಾರ ಈ ಕೆಲ್ಸಕ್ಕೆ ಕೈ ಹಾಕಿದೆ. ನಮ್ಮ ನಾಯಕರ ತ್ಯಾಗ ಹಾಗೂ ಹೋರಾಟದ ಹೆಸರು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಪದಾಧಿಕಾರಿಗಳು ಪ್ರತಿಭಟನೆ ಮಾಡಬೇಕು. ಅಲ್ಲಿರುವ ಕೇಂದ್ರ ಸರ್ಕಾರದ ಕಚೇರಿ ಮುಂದೆ ಪ್ರತಿಭಟನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Groin Injury :  ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಕೆಎಲ್ ರಾಹುಲ್!

Next Post

Chikkanna | Umapathi | ಅಧ್ಯಕ್ಷ ಸಿನಿಮಾ ರೀಮೇಕ್‌ ಉಪಾಧ್ಯಕ್ಷ ಸಿನಿಮಾ ಸ್ವಮೇಕ್‌

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
Chikkanna | Umapathi | ಅಧ್ಯಕ್ಷ ಸಿನಿಮಾ ರೀಮೇಕ್‌ ಉಪಾಧ್ಯಕ್ಷ ಸಿನಿಮಾ ಸ್ವಮೇಕ್‌

Chikkanna | Umapathi | ಅಧ್ಯಕ್ಷ ಸಿನಿಮಾ ರೀಮೇಕ್‌ ಉಪಾಧ್ಯಕ್ಷ ಸಿನಿಮಾ ಸ್ವಮೇಕ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada