ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳಪೆ ರಸ್ತೆ ಹಾಗು ಮೂಲಬೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.
ನಲ್ಲೂರಹಳ್ಳಿ ಹಾಗು ವೈಟ್ಫೀಲ್ಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಸ್ತೆ ಸಂಪೂರ್ಣವಾಗಿ ರಸ್ತೆಗಳು ಹದಗೆಟ್ಟಿದ್ದು ಸಂಚರಿಸಲು ಯೋಗ್ಯವಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಂಡು ಮೂಲಭೂತಸೌಕರ್ಯ ಒದಗಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಬಿಬಿಎಂಪಿ, ನಗರಸಭೆ ಹಾಗು ಸ್ಥಳೀಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ನಲ್ಲೂರಹಳ್ಳಿ ಗ್ರಾಮಸ್ಥರು ನಡೆಸಿದ ಪ್ರತಿಭಟನೆಯ ಫಲವಾಗಿ ಸುತ್ತಮುತ್ತಲಿನ ಬಡಾವಣೆಯ ನಾಗರೀಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ಸ್ಥಳೀರು ತಿಳಿಸಿದ್ದಾರೆ.