• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಗ್ನಿಪಥ್ ಯೋಜನೆ ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುತ್ತದೆ : ಸಿದ್ದರಾಮಯ್ಯ

Any Mind by Any Mind
June 17, 2022
in ಕರ್ನಾಟಕ
0
ಕಿಮ್ಮನೆ ರತ್ನಾಕರ್‌ ಅವರು ಒಬ್ಬ ಸಭ್ಯ ರಾಜಕಾರಣಿ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಅಗ್ನಿಪಥ್ ಯೋಜನೆ ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ  ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ಹೇಳಿದ್ದಾರೆ.

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ?

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ  ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ  ನರೇಂದ್ರ ಮೋದಿ ಎಂದು ಹೇಳಿದ್ದಾರೆ.

ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದಿದ್ದಾರೆ.

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಹೇಳಿದ್ದಾರೆ.

Tags: BJPCongress PartyCovid 19ಅಗ್ನಿಪಥ್ಕೋವಿಡ್-19ನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ನಷ್ಟದಲ್ಲಿರುವ BMTCಯಿಂದ ಮತ್ತೊಂದು ಸಾಹಸ : ವೋಲ್ವೋ ಬಸ್ ಗಳಿಗೆ ಗುಂಡಿ ತೋಡಿತೇ ನಿಗಮ?

Next Post

ಕೈಗಾರಿಕಾ ಇಲಾಖೆಯಿಂದ ಸಿಹಿ ಸುದ್ದಿ :  81 ಹೊಸ ಯೋಜನೆಗಳಿಗೆ 2,689.51 ಕೋಟಿ ರೂ. ಅನುಮೋದನೆ!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಕೈಗಾರಿಕಾ ಪ್ರದೇಶದಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯ: ಕೊರತೆಯಾದರೆ ಅಧಿಕಾರಿಗಳಿಗ ವಿರುದ್ದ ಕ್ರಮ!: ಸಚಿವ ನಿರಾಣಿ ಖಡಕ್ ಸೂಚನೆ

ಕೈಗಾರಿಕಾ ಇಲಾಖೆಯಿಂದ ಸಿಹಿ ಸುದ್ದಿ :  81 ಹೊಸ ಯೋಜನೆಗಳಿಗೆ 2,689.51 ಕೋಟಿ ರೂ. ಅನುಮೋದನೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada