ಅಗ್ನಿಪಥ್ ಯೋಜನೆ ಬಗ್ಗೆ ಕೇಂದ್ರದ ನಿರ್ಧಾರ ಸರಿಯಲ್ಲ ಎಂದು ಅನಿಸಿರಬಹುದು. ಆದರೆ ದೀರ್ಘಾವಧಿಯಲ್ಲಿ ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಲವು ನಿರ್ಧಾರಗಳು ಆ ಸಮಯಕ್ಕೆ ನ್ಯಾಯಸಮ್ಮತವಾಗಿಲ್ಲ ಎಂದು ಅನಿಸುತ್ತದೆ. ಆದರೆ ದೇಶವನ್ನು ಕಟ್ಟುವ ದೀರ್ಘಾವಧಿ ಯೋಜನೆಗಳಿಗೆ ಇವು ಉಪಯೋಗಕಾರಿ ಎಂದರು.
ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಅಗ್ನಿಪಥ್ ಯೋಜನೆ ಬಗ್ಗೆ ನಿರ್ದಿಷ್ಟವಾಗಿ ಎಲ್ಲಿಯೂ ಉಲ್ಲೇಖಿಸದ ಪ್ರಧಾನಿ ಮೋದಿ, ಪರೋಕ್ಷವಾಗಿ ಅಗ್ನಿಪಥ್ ಯೋಜನೆಯನ್ನು ಸಮರ್ಥಿಸಿಕೊಂಡರು.












