• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

NDRF ನಿಯಮಗಳನ್ನು ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿಗೆ ಪರಿಹಾರ ನೀಡಿ : ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ

Any Mind by Any Mind
June 21, 2022
in ಕರ್ನಾಟಕ
0
ಕಿಮ್ಮನೆ ರತ್ನಾಕರ್‌ ಅವರು ಒಬ್ಬ ಸಭ್ಯ ರಾಜಕಾರಣಿ : ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

NDRF ನಿಯಮಗಳನ್ನು ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡುವಂತೆ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ಬಿಡುಗಡೆ ಮಾಡುತ್ತದೆ. ಪ್ರತಿ 5 ವರ್ಷಗಳಿಗೆ ಒಮ್ಮೆ ಎನ್‍ಡಿಆರ್‍ಎಫ್ ನಿಯಮಗಳನ್ನು ತಿದ್ದುಪಡಿ ಮಾಡಿ ರೈತರ ಬೆಳೆಗಳಿಗೆ ಇನ್‍ಫುಟ್ ಸಬ್ಸಿಡಿಯ ಮೊತ್ತ, ಮೀನುಗಾರರ ದೋಣಿಗಳಿಗೆ ಆದ ಹಾನಿ, ಜನ ಜಾನುವಾರಿಗಳಿಗೆ ಉಂಟಾದ ತೊಂದರೆ, ಮನೆ ಹಾನಿ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಆದ ನಷ್ಟಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಿಸಲಾಗುತ್ತದೆ. ಆದರೆ 2015-20ಕ್ಕೆ ಅನ್ವಯವಾಗುವಂತೆ ರೂಪಿಸಿದ ನಿಯಮಗಳನ್ನು 2015 ರಲ್ಲಿ ಪರಿಷ್ಕರಿಸಲಾಗಿತ್ತು. ಸಹಜವಾಗಿ ಇದು 2020 ರಲ್ಲಿ ಮತ್ತೆ ಪರಿಷ್ಕರಿಸಬೇಕಾಗಿತ್ತು. ಇದುವರೆಗೂ ಪರಿಷ್ಕರಣೆ ಮಾಡಿಲ್ಲ ಎಂದು ಹೇಳಿದ್ದಾರೆ

ಕಳೆದ ಎರಡು ವರ್ಷಗಳಿಂದ ಎಲ್ಲ ಉತ್ಪನ್ನಗಳ ಬೆಲೆ ದುಪ್ಪಟ್ಟಾಗಿವೆ. ಹಣದುಬ್ಬರ ದಾಖಲೆ ಮಟ್ಟಕ್ಕೆ ತಲುಪಿದೆ. ಇಷ್ಟಾದರೂ ಕೇಂದ್ರ ಸರ್ಕಾರ ಎನ್‍ಡಿಆರ್‍ಎಫ್ ನಿಯಮಗಳನ್ನು ಪರಿಷ್ಕರಿಸಿಲ್ಲ. ಪ್ರಸ್ತುತ ಒಂದು ಎಕರೆ ಮಳೆಯಾಶ್ರಿತ ಪ್ರದೇಶದಲ್ಲಿ ರೈತರು ಬೆಳೆದ ಬೆಳೆ ಶೇ.33ಕ್ಕಿಂತ ಹೆಚ್ಚು  ಹಾನಿಯಾದರೆ   ಸಿಗುವ ಪರಿಹಾರ ಕೇವಲ 2720 ರೂಪಾಯಿ ಮಾತ್ರ.  ಅದರಲ್ಲೂ ಗರಿಷ್ಠ 2.5 ಹೆಕ್ಟೇರ್‍ಗೆ ಅಂದರೆ 6800 ಮಾತ್ರ.  ಪ್ರತಿ ಗುಂಟೆ ಗೆ ಕೇವಲ 68 ರೂಪಾಯಿ ಸಿಗುತ್ತದೆ.  ಆದರೆ ಒಂದು ಎಕರೆ ರಾಗಿ, ಜೋಳ ಬೆಳೆಯಲು ಕನಿಷ್ಠ 25000 ರೂಪಾಯಿ ಖರ್ಚು ತಗಲುತ್ತದೆ. ಈ ಮೊತ್ತ ಪರಿಷ್ಕರಣೆಯಾಗಲೇಬೇಕಾಗಿದೆ.  ನಾನು ವಿಧಾನಸಭೆಯ ಅಧಿವೇಶನಗಳಲ್ಲಿ ಕನಿಷ್ಠ 25000 ರೂ ಕೊಡಿ ಎಂದು ಒತ್ತಾಯಿಸಿದ್ದೆ. 

ಕೇಂದ್ರ ಸರ್ಕಾರ ಈ ಮೊತ್ತವನ್ನು ಪರಿಷ್ಕರಣೆ ಮಾಡದ ಕಾರಣದಿಂದ ಕಳೆದ 2 ವರ್ಷಗಳಿಂದ ರೈತರಿಗೆ ವಿಪರೀತ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಸಂಭವಿಸಿರುವ ನಷ್ಟದ ಪ್ರಮಾಣ ಒಂದು ಅಂದಾಜಿನ ಪ್ರಕಾರ 2 ಲಕ್ಷ ಕೋಟಿ ರೂಗಳಷ್ಟಾಗಬಹುದು. ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಮೊತ್ತ ಕೇವಲ 3965 ಕೋಟಿ ರೂ ಮಾತ್ರ ಎಂದಿದ್ದಾರೆ.

ರಾಜ್ಯದಲ್ಲಿ ಮೇ ತಿಂಗಳಿಂದ ನವೆಂಬರ್‍ವರೆಗೆ ಸಂಭವಿಸಿದ ಪ್ರವಾಹದ ಹಾನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾರ್ಚ್-2022 ರಲ್ಲಿ ಕೇವಲ 492 ಕೋಟಿ ಬಿಡುಗಡೆ ಮಾಡಿದೆ. ಇದು ಮೋದಿ ಸರ್ಕಾರದ ವೇಗ ಮತ್ತು ರೈತ ಪರ ಕಾಳಜಿ ಎಂದು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ಜನರು ಮತ್ತು ವಿರೋಧ ಪಕ್ಷಗಳು ಪರಿಹಾರಕ್ಕಾಗಿ ಒತ್ತಡಗಳನ್ನು ತಂದಾಗ ರಾಜ್ಯ ಸರ್ಕಾರ 2391 ಕೋಟಿ ರೂಪಾಯಿಗಳಷ್ಟು ಪರಿಹಾರವನ್ನು ರೈತರಿಗೆ ನೀಡಿತು. ಕೇಂದ್ರ ಸರ್ಕಾರ ನೀಡಬೇಕಾದ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ನೀಡಬೇಕಾಯಿತು. ಆ ಮೂಲಕ ಕೇಂದ್ರವು ರಾಜ್ಯವನ್ನು ಇನ್ನಷ್ಟು ನಶೋಷಣೆ ಮಾಡಿತು. ಕಳೆದ 3 ವರ್ಷಗಳಿಂದ ರಾಜ್ಯ ಸರ್ಕಾರ 3890 ಕೋಟಿ ರೂಗಳನ್ನು ರೈತರಿಗೆ, ವಸತಿ ಹಾನಿಯಾದವರಿಗೆ ನೀಡಿದೆ. ಇದಿಷ್ಟೂ ಸೇರಿದಂತೆ ಹೆಚ್ಚುವರಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕಾಗಿತ್ತು. ಯಾಕೆಂದರೆ ಪರಿಹಾರ ನೀಡುವುದಕ್ಕೋಸ್ಕರವೆ ಕೇಂದ್ರದ ಬಜೆಟ್‍ನಲ್ಲಿ ಹಣ ಮೀಸಲಿರಿಸಲಾಗುತ್ತದೆ. ಆದರೆ ಕರ್ನಾಟಕಕ್ಕೆ ಕೊಡಬೇಕಾದಷ್ಟು ಪರಿಹಾರವನ್ನು ನೀಡದೆ ಅನ್ಯಾಯ ಮಾಡಿದೆ.

ಆದ್ದರಿಂದ ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದೇನೆಂದರೆ, ಮೊದಲು ಎನ್‍ಡಿಆರ್‍ಎಫ್ ನಿಯಮಗಳಿಗೆ 2020 ರಿಂದಲೆ ಪೂರ್ವಾನ್ವಯವಾಗುವಂತೆ ತಿದ್ದುಪಡಿ ಮಾಡಿ ಬಾಕಿ ಪರಿಹಾರವನ್ನು ಬಿಡುಗಡೆ ಮಾಡಬೇಕು. ರೈತರಿಗೆ ನಷ್ಟವಾದ ಅಷ್ಟೂ ಹಣವನ್ನು ನಷ್ಟವಾದ ಅಷ್ಟೂ ಎಕರೆಗೆ ಪರಿಹಾರ ನೀಡುವ ಹಾಗೆ ತಿದ್ದುಪಡಿ ತರಬೇಕು. ಮನೆ ಕಳೆದುಕೊಂಡವರಿಗೆ, ಮೀನುಗಾರರಿಗೆ ಹಾಗೂ ಇತರೆ ಎಲ್ಲ ಬಾಧಿತರಿಗೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಪರಿಹಾರ ನೀಡುವಂತಾಗಬೇಕು.

ಜೊತೆಗೆ, ಹವಾಮಾನ ವೈಪರೀತ್ಯವು ರೈತರನ್ನು ತೀವ್ರವಾಗಿ ಬಾಧಿಸುವ ಸಂಗತಿಯಾದ ಕಾರಣ ಮುಂದಿನ ದಿನಗಳಲ್ಲಿ ಈ ಸಮಸ್ಯೆ ಇನ್ನೂ ಹೆಚ್ಚಾಗುತ್ತದೆ, ರೈತರು ಇನ್ನಷ್ಟು ಹೆಚ್ಚು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ವಿಜ್ಞಾನಿಗಳು ತಜ್ಞರು ರಾಜ್ಯ ಸರ್ಕಾರಕ್ಕೆ ಹಿಂದಿನ ವರ್ಷ ವರದಿ ನೀಡಿದ್ದಾರೆ. ಸದರಿ ವರದಿಯನ್ನು ಆಧರಿಸಿ ಸರ್ಕಾರ ಸಮಗ್ರವಾದ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಬೇಕಾಗಿತ್ತು. ಆದರೆ ಭ್ರಷ್ಟಾಚಾರದ ಕೂಪದಲ್ಲಿ ಮುಳುಗೇಳುತ್ತಿರುವ ಸರ್ಕಾರಕ್ಕೆ ಇದನ್ನೆಲ್ಲ ಮಾಡಲು ಪುರುಸೊತ್ತು ಇಲ್ಲವಾಗಿದೆ. ಪ್ರವಾಹ, ಬರ ಬಂದು ಜನರು ಸಂಕಷ್ಟದಲ್ಲಿದ್ದಾಗಲೂ ಸರ್ಕಾರ ನಿದ್ರೆಯಲ್ಲಿದ್ದಂತೆ ನಟಿಸಿಕೊಂಡು ಕಾಲ ಕಳೆದಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳಲ್ಲಿ ಬಹುಪಾಲು ಜನರು ಜಿಲ್ಲೆಗಳಿಗೆ ಭೇಟಿ ಮಾಡದೆ ನಿರ್ಲಕ್ಷ್ಯ ಮಾಡಿದರು. ಹಾಗಾಗಿ ಸರ್ಕಾರ ಜಡತೆಯಿಂದ, ಮನುಷ್ಯರನ್ನು ದ್ವೇಷದಿಂದ ಒಡೆದು ಹಾಕುವ ಕೆಟ್ಟತನದಿಂದ ಹೊರಬಂದು ಬರ ಪ್ರವಾಹಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿಭಾಯಿಸುವಂತಹ ವ್ಯವಸ್ಥೆ ರೂಪಿಸಬೇಕು ಎಂದಿದ್ದಾರೆ.

ಇತ್ತೀಚೆಗೆ ಅಸಾನಿ ಚಂಡಮಾರುತದಿಂದ ತೊಂದರೆಗಳಿಗೆ ಒಳಗಾದವರಿಗೆ ತುರ್ತಾಗಿ ಪರಿಹಾರ ನೀಡಬೇಕು. ಕಳೆದ ಮೂರು ವರ್ಷಗಳಿಂದ ಹಾನಿಯಾಗಿರುವ ಸಾವಿರಾರು ಮನೆಗಳಿಗೆ ಈಗಲೂ ಸಮರ್ಪಕ ಪರಿಹಾರ ನೀಡಿಲ್ಲ. ಶಾಶ್ವತ ನೆಲೆ ಕಲ್ಪಿಸಿಲ್ಲ. ಈ ವ್ಯವಸ್ಥೆಯನ್ನು ತುರ್ತಾಗಿ ಮಾಡಬೇಕಾಗಿದೆಯೆಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅರ್ಜಿ ಆಹ್ವಾನ!

Next Post

ಯೋಗಕ್ಕೆ ಒಂದು ಧರ್ಮದ ಹಣೆಪಟ್ಟಿ ಕಟ್ಟಿದ್ದಾರೆ : ನಟಿ ಅದಿತಿ ಪ್ರಭುದೇವ್

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಯೋಗಕ್ಕೆ ಒಂದು ಧರ್ಮದ ಹಣೆಪಟ್ಟಿ ಕಟ್ಟಿದ್ದಾರೆ : ನಟಿ ಅದಿತಿ ಪ್ರಭುದೇವ್

ಯೋಗಕ್ಕೆ ಒಂದು ಧರ್ಮದ ಹಣೆಪಟ್ಟಿ ಕಟ್ಟಿದ್ದಾರೆ : ನಟಿ ಅದಿತಿ ಪ್ರಭುದೇವ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada