ವಿಶ್ವ ಯೋಗ ದಿನಾಚರಣೆ ಅಂಗವಾಗಿ ಇಂದು ಮಂಗಳವಾರ ಬೆಂಗಳೂರಿನ ಮಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯೋಗದಿಂದ ಸ್ಯಾಂಡಲ್ ಹುಡ್ ಸ್ಟಾರ್ ನಟಿ ಅದಿತಿ ಪ್ರಭುದೇವ ತನ್ನ ಭಾವಿ ಪತಿಯೊಂದಿಗೆ ಬಂದು ಯೋಗದ ಮಹತ್ವದ ಬಗ್ಗೆ ತಿಳಿಸಿದ್ದಾರೆ.

ಹೌದು, ಯೋಗದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಗ ಒಂದು ಬ್ರಹ್ಮಾಂಡ. ಯೋಗದಿಂದ ದೇಹ, ಮನಸ್ಸು, ಆತ್ಮ, ಪರಮಾತ್ಮವನ್ನು ಒಟ್ಟಿಗೆ ಸೇರಿಸುತ್ತದೆ. ನಮ್ಮನ್ನು ನಾವು ಅರಿತುಕೊಳ್ಳಲು ಯೋಗ ಹೆಚ್ಚು ಸಹಾಯ ಮಾಡುತ್ತದೆ. ಯೋಗ ಅಭ್ಯಾಸದಿಂದ ಉತ್ತಮ ವ್ಯಕ್ತಿಯಾಗಿ ರೂಪುಕೊಳ್ಳಲು ಸಾಧ್ಯ. ಆದರೆ ಯೋಗಕ್ಕೆ ಒಂದು ಧರ್ಮದ ಹಣೆಪಟ್ಟಿ ಕಟ್ಟಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.






