ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಬುದ್ಧ ಬಸವ ಅಂಬೇಡ್ಕರ್ ನಾರಾಯಣಗುರು, ಕುವೆಂಪು, ಜೈನ ಧರ್ಮ ಸೇರಿದಂತೆ ಅನೇಕ ಪರಿಷ್ಕೃತ ಪಠ್ಯಕ್ಕೆ ಈಗಾಗಲೇ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈಗ ಪಠ್ಯಪುಸ್ತಕದಲ್ಲಿ ಕನಕದಾಸರಿಗೆ ಅಪಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಕೆಲ್ಲೋಡು ಬಳಿಯ ಕಾಗಿನೆಲೆ ಗುರುಪೀಠ ಶಾಖಾಮಠದ ಈಶ್ವರಾನಂದಪುರಿ ಸ್ವಾಮೀಜಿ ಪತ್ರ ಬರೆದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡು ಬಳಿಯ ಕಾಗಿನೆಲೆ ಕನಕ ಗುರುಪೀಠ ಶಾಖಾ ಮಠದ ಈಶ್ವರಾನಂದ ಸ್ವಾಮೀಜಿ ಸಿಎಂ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿಸಿ ನಾಗೇಶ್ಗೆ ಪತ್ರ ಬರೆದಿದ್ದು, ಪರಿಷ್ಕೃತ ಪಠ್ಯದಲ್ಲಿ ಕನಕದಾಸರಿಗೆ ಅಪಮಾನವಾಗಿದ್ದು, ಪಠ್ಯದಲ್ಲಿ ಇರುವ ಲೋಪಗಳನ್ನು ಸರಿಪಡಿಸಿ ಪಠ್ಯ ಒದಗಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.