ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಪರಿಸರ ರಾಯಭಾರಿ ಗೌರವ ನೀಡುವುದರ ಜೊತೆಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರ ತಿಮ್ಮಕ್ಕನವರ 111ನೇ ಜಯಂತ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
ರಾಜ್ಯದ ಉದ್ದಗಲಕ್ಕು ಪರಿಸರ ಸಂರಕ್ಷಣೆ ಮಾಡುವ ಸಲುವಾಗಿ ಅವರಿಗೆ ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜಕ್ಕೆ ತೆರಳಿದ್ದರು ಸಹ ಅದರ ಖರ್ಚನ್ನು ಸಹ ರಾಜ್ಯ ಸರ್ಕಾರವೇ ಭರಿಸುತ್ತದೆ. ವಾರ್ತಾ ಮತ್ತು ಪ್ರಸಾರ ಖಾತೆ ಇಲಾಖೆಯಿಂದ ಸಾಲು ಮರದ ತಿಮ್ಮಕ್ಕನವರ ಜೀವನಾಧಾರಿತ ವೆಬ್ ಸೀರಿಸ್ ಮಾಡಲಾಗುವುದು.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನಲ್ಲಿ 10 ಎಕರೆ ಜಮೀನು ಬೆಂಗಳೂರಿನಲ್ಲಿ ಸರ್ಕಾರದ ವತಿಯಿಂದ ನಿವೇಶನ ನೀಡಲಾಗಿದ್ದು ಮನೆಯನ್ನು ನಿರ್ಮಿಸಿಕೊಡಲಾಗುವುದು ಎಂದಿದ್ದಾರೆ.