ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸದ್ದು ಮಾಡಿದ ಮಹಾರಾಷ್ಟ್ರ ಬಿಕ್ಕಟ್ಟು ಸುಖಾಂತ್ಯ ಕಂಡಿದ್ದು ಮಹತ್ವದ ಬೆಳವಣಿಗೆಯಲ್ಲಿ ಬಂಡಾಯ ನಾಯಕ ಏಕಣಾತ್ ಶಿಂಧೆ ಗುರುವಾರ ಸಂಜೆ 7:30ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆ ಮುಖ್ಯಮಂತ್ರಿಯಾಗಿ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾನ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಬಂಡಾಯ ಶಿವಸೇನೆ ನಾಯಕರಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.
ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಶಿಂಧೆಯೊಂದಿಗೆ ರೆಬೆಲ್ ಕ್ಯಾಂಪ್ನ 8 ಶಾಸಕರು ಬಿಜೆಪಿ ಹಾಗು ಕೆಲವು ಪಕ್ಷೇತರ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.