ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಎಲ್ಲ ಮೂರು ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಕೊಡಲಾಗಿದೆ ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಎರಡು ದಿನಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ ಎಂದಿದೆ.
ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಆದರೆ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರಿನ ರಸ್ತೆಗಳು ಜಲಾವೃತ !
ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳು ಮತ್ತು ಕಟ್ಟಡಗಳಿಗೆ ನೀರು ನುಗ್ಗಿ ದೈನಂದಿನ ಜೀವನಕ್ಕೆ ಅಡ್ಡಿಯಾಗಿದೆ. ಜಲಾವೃತಗೊಂಡ ರಸ್ತೆಗಳು ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಸವಾಲಾಗಿ ಪರಿಣಮಿಸಿದ್ದರಿಂದ ಕರಾವಳಿ ಜಿಲ್ಲೆಗಳಲ್ಲಿ ಸಂಚಾರ ಆಮೆ ಗತಿಯಲ್ಲಿ ಸಾಗಿದೆ. ಕಳೆದ 24 ಗಂಟೆಗಳಲ್ಲಿ 11 ಮನೆಗಳಿಗೆ ತೀವ್ರ ಹಾನಿಯಾಗಿದ್ದು, 77 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ಪಡೆಗಳು ಸ್ಥಳದಲ್ಲಿ ಮೊಕ್ಕಾಂ !
ರಾಜ್ಯ ವಿಪತ್ತು ಪರಿಹಾರ ಪಡೆಗಳ 86 ತಂಡಗಳು ಮತ್ತು 50 ನಾಗರಿಕ ರಕ್ಷಣಾ ತಂಡಗಳು ಜಿಲ್ಲೆಯಲ್ಲಿ ಹವಾಮಾನ ಅಧಿಕಾರಿಗಳು ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 9 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದಿದ್ದಾರೆ.











