ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 284 ರನ್ ಗೆ ಆಲೌಟಾಗಿದೆ. ಈ ಮೂಲಕ ಭಾರತ 132 ರನ್ ಗಳ ಭಾರೀ ಮುನ್ನಡೆ ಗಿಟ್ಟಿಸಿದೆ.
ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದ ಮೂರನೇ ದಿನವಾದ ಭಾನುವಾರ 5 ವಿಕೆಟ್ ಗೆ 84 ರನ್ ಗಳಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಇಂಗ್ಲೆಂಡ್ ತಂಡ 284 ರನ್ ಗೆ ಆಲೌಟಾಗಿದೆ. ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ 416 ರನ್ ಗಳಿಸಿದ್ದು, 132 ರನ್ ಮಹತ್ವದ ಮುನ್ನಡೆ ಗಳಿಸಿದೆ.

ಇಂಗ್ಲೆಂಡ್ ತಂಡದ ಏಕಾಂಗಿ ಹೋರಾಟ ನಡೆಸಿದ ಜಾನಿ ಬೇರ್ ಸ್ಟೊ ಶತಕದ ಆಸರೆ ನೀಡಿದರೂ ತಂಡಕ್ಕೆ ಮುನ್ನಡೆ ತಂದುಕೊಡುವಲ್ಲಿ ವಿಫಲರಾದರು. ಬೇರ್ ಸ್ಟೊ 140 ಎಸೆತಗಳಲ್ಲಿ 14 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 106 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ. ಕೆಳ ಕ್ರಮಾಂಕದಲ್ಲಿ ನಾಯಕ ಬೆನ್ ಸ್ಟೋಕ್ಸ್ (25) ಮತ್ತು ಸ್ಯಾಮ್ ಬಿಲ್ಲಿಂಗ್ಸ್ (ಅಜೇಯ 24) ತಂಡವನ್ನು ಆಧರಿಸಿದ್ದಾರೆ.