• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಲ್ವಾರ್ ದೇಗುಲ ಧ್ವಂಸ ಪ್ರಕರಣ : ಪ್ರತಿಕ್ರಿಯೆ ನೀಡಲು ಅರ್ನಾಬ್‌ಗೆ 10 ದಿನಗಳ ಕಾಲಾವಕಾಶ ನೀಡಿದ ರಾಜಸ್ಥಾನ ಹೈಕೋರ್ಟ್

Any Mind by Any Mind
July 6, 2022
in ದೇಶ
0
ಅಲ್ವಾರ್ ದೇಗುಲ ಧ್ವಂಸ ಪ್ರಕರಣ : ಪ್ರತಿಕ್ರಿಯೆ ನೀಡಲು ಅರ್ನಾಬ್‌ಗೆ 10 ದಿನಗಳ ಕಾಲಾವಕಾಶ ನೀಡಿದ ರಾಜಸ್ಥಾನ ಹೈಕೋರ್ಟ್
Share on WhatsAppShare on FacebookShare on Telegram

ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತಿರುವ ಆರೋಪದ ಮೇಲೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ 10 ದಿನಗಳಲ್ಲಿ ಪ್ರತಿಕ್ರಿಯಿಸುವಂತೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ ಸೂಚಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ADVERTISEMENT

ಮೇ ತಿಂಗಳಲ್ಲಿ, ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರ ದೂರಿನ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಉದಯಪುರದ ಅಂಬಾಮಾತಾ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು.

ಅಲ್ವಾರ್ ಜಿಲ್ಲೆಯ ರಾಜ್‌ಗಢದಲ್ಲಿ ದೇವಸ್ಥಾನವನ್ನು ಕೆಡವಿದ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಹಿಂದಿ ಆವೃತ್ತಿಯಾದ ರಿಪಬ್ಲಿಕ್ ಭಾರತ್‌ನಲ್ಲಿ ಏಪ್ರಿಲ್‌ನಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡಿದ ಆರೋಪವನ್ನು ಗೋಸ್ವಾಮಿ ಎದುರಿಸುತ್ತಿದ್ದಾರೆ.

ಏಪ್ರಿಲ್ 17 ರಂದು ಎರಡು ದೇವಾಲಯಗಳು ಮತ್ತು ಕೆಲವು ಅಂಗಡಿಗಳನ್ನು ನಾಗರಿಕ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. NDTV ಪ್ರಕಾರ, ಅಲ್ವಾರ್ ಜಿಲ್ಲೆಯ ರಾಜ್ಗಢ್ದಲ್ಲಿ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಹಾಗೂ ಸರ್ಕಾರ ರಸ್ತೆ ಅಗಲೀಕರಣದ ಹೆಸರಿನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ಕೆಡವಿತ್ತು. ರಾಜ್‌ಗಢ್ ಪುರಸಭೆಯೂ ಬಿಜೆಪಿ ಆಡಳಿತದಲ್ಲಿದೆ ಆದರೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಆಡಳಿತವಿದೆ.

ಗೋಸ್ವಾಮಿ ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295A (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶಪೂರಿತ ಕೃತ್ಯಗಳು), 120B (ಕ್ರಿಮಿನಲ್ ಪಿತೂರಿ), 499 (ಮಾನನಷ್ಟ), 501 (ಮಾನಹಾನಿಕರ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಪ್ರಕರಣದ ಜೊತೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ಆರೋಪ ಹೊರಿಸಲಾಗಿತ್ತು.

ಗೋಸ್ವಾಮಿ ಅವರು ಮೇ ತಿಂಗಳಲ್ಲಿ FIRಅನ್ನು ರದ್ದುಗೊಳಿಸುವಂತೆ ಕೋರಿದ್ದರು. ಗೋಸ್ವಾಮಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ದೂರು ರಾಜಕೀಯ ಪ್ರೇರಿತ ಎಂದು ಹೇಳಿದ್ದರು.  ಮೇ 20 ರಂದು, ರಾಜಸ್ಥಾನ ಹೈಕೋರ್ಟ್ ಮುಂದಿನ ವಿಚಾರಣೆಯ ದಿನಾಂಕದವರೆಗೆ ಗೋಸ್ವಾಮಿಗೆ ಮಧ್ಯಂತರ ರಕ್ಷಣೆ ನೀಡಿತು ಎಂದು ಲೈವ್ ಲಾ ವರದಿ ಮಾಡಿದೆ.

“ಪ್ರಕರಣದ ಸತ್ಯಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿ ಮತ್ತು ಎಫ್‌ಐಆರ್‌ನಲ್ಲಿ ಮಾಡಲಾದ ಆರೋಪಗಳು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಸಂಬಂಧಿಸಿವೆ ಎಂದು ಪರಿಗಣಿಸಿ, ಅರ್ಜಿದಾರರ ತಕ್ಷಣದ ಮತ್ತು ತುರ್ತು ವಿಚಾರಣೆಗೆ ಒಳಪಡುವುದಿಲ್ಲ ಎಂದು ಈ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ವಿಶೇಷವಾಗಿ ಕಾರ್ಯಕ್ರಮದ ವಿವರಗಳಾಗಲಿ ಅಥವಾ ಯಾವುದೇ ನಿರ್ದಿಷ್ಟ ಘಟನೆಯಾಗಲಿ ಲಿಖಿತ ಮಾಹಿತಿಯಲ್ಲಿ ಸೂಚಿಸದಿರುವುದನ್ನು, “ನ್ಯಾಯಮೂರ್ತಿ ದಿನೇಶ್ ಮೆಹ್ತಾ ಗಮನಿಸಿದ್ದರು.

ಮಂಗಳವಾರ, ನ್ಯಾಯಮೂರ್ತಿ ಮೆಹ್ತಾ ಅವರು,  ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿದರು. ಗೋಸ್ವಾಮಿಗೆ ನೀಡಲಾದ ಮಧ್ಯಂತರ ರಕ್ಷಣೆ ಆದೇಶವು ಜುಲೈ 19ಕ್ಕೆ ವರೆಗೆ ಮುಂದುವರಿಸುವಂತೆ ಆದೇಶ ನೀಡಿದ್ದಾರೆ. ಜೊತೆಗೆ ಈ ಆರೋಪಗಳಿಗೆ 10 ದಿನಗಳಲ್ಲಿ ಪ್ರತಿಕ್ರಿಯಿಸುವಂತೆ ಕೋರ್ಟ್‌ ಆದೇಶಿದೆ. ಆದರೆ ಗೋಸ್ವಾಮಿಯ ಮಧ್ಯಂತರ ರಕ್ಷಣೆಯನ್ನು ಹಿಂಪಡೆಯಬೇಕೆಂದು ರಾಜ್ಯ ಸರ್ಕಾರ ಬಯಸಿತ್ತು.

Tags: BJPCongress PartyCovid 19ಅರ್ನಾಬ್‌ಕೋವಿಡ್-19ನರೇಂದ್ರ ಮೋದಿಬಿಜೆಪಿರಾಜಸ್ಥಾನ ಹೈಕೋರ್ಟ್
Previous Post

ದೆಹಲಿಯಲ್ಲಿ ಚುನಾವಣೆ ನಡೆಸದಿರಲು ಕೇಂದ್ರ ಸರ್ಕಾರ ಯೋಜನೆ: ಅರವಿಂದ್‌ ಕೇಜ್ರೀವಾಲ್‌ ಆರೋಪ

Next Post

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಚಂದ್ರಶೇಖರ್‌ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು?

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಒಬ್ಬ ಆರೋಪಿ ಪೊಲೀಸ್ ವಶಕ್ಕೆ

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಚಂದ್ರಶೇಖರ್‌ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada