• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೌದು‌ ನಾನೂ ಲಕ್ಕಿ ಡಿಪ್ ಸಿಎಂ, ಏನಿವಾಗ? : ಮಾಜಿ ಸಿಎಂ ಕುಮಾರಸ್ವಾಮಿ

Any Mind by Any Mind
July 6, 2022
in ಕರ್ನಾಟಕ
0
ಸಿಎಂ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಇಂತಹ ಸಮಯದಲ್ಲಿ ಮೌನವಾಗಿರಬೇಡಿ : ಹೆಚ್‌ಡಿ ಕುಮಾರಸ್ವಾಮಿ | HDK |  Bommai
Share on WhatsAppShare on FacebookShare on Telegram

ADVERTISEMENT

ಜೆಡಿಎಸ್ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಸತತವಾಗಿ ಟೀಕಿಸುತ್ತಿರುವುದು ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹೌದು, ನಾನು ಲಕ್ಕಿ ಡಿಪ್ ಸಿಎಂ ಏನಿವಾಗ? ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ? ಎಂದು ಮಾಜಿ ಸಿಎಂ
#ಆಪರೇಷನ್_ಕಮಲ_ಸಿಎಂ_ಮತ್ತು_ಲಕ್ಕಿಡಿಪ್_ಸಿಎಂ ಎಂದು ಕಿಡಿಕಾರಿದ್ದಾರೆ‌

ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ ಎಂದು ಹೇಳಿದ್ದಾರೆ.

ಲಕ್ಕಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಪ್ರಶ್ನಿಸಿದ್ದಾರೆ.

ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!!

ʼಮಿಷನ್‌ ದಕ್ಷಿಣ್‌ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದಿದ್ದಾರೆ.

ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ. 5/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022

ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದು ಕಿಡಿಕಾರಿದ್ದಾರೆ.

ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ;

1.ಯಡಿಯೂರಪ್ಪ & ಸನ್ಸ್‌
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌

8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌
7/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022

8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌

ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. 'ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ' ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ?
ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ 'ಪರಿವಾರಕೋಟಿ'ಯನ್ನೇ ಬರೆಯಬಹುದು.
8/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022

ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ?
ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು ಎಂದು ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಚಂದ್ರಶೇಖರ್‌ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು?

Next Post

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಬದ್ಧ : ಚೀಫ್ ಕಮಿಷನರ್ ತುಷಾರ್ ಗಿರಿನಾಥ್!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಬದ್ಧ : ಚೀಫ್ ಕಮಿಷನರ್ ತುಷಾರ್ ಗಿರಿನಾಥ್!

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಬದ್ಧ : ಚೀಫ್ ಕಮಿಷನರ್ ತುಷಾರ್ ಗಿರಿನಾಥ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada