ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟದಿಂದ ಹಠಾತ್ ಪ್ರವಾಹ ಉಂಟಾಗಿದ್ದು, ಮಹಿಳೆ ಸೇರಿದಂತೆ 6 ಮಂದಿ ನಾಪತ್ತೆಯಾಗಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಅಧಿಕ ಮಳೆ ಸುರಿಯುತ್ತಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ. ಇದೇ ವೇಳೆ ಸಂಭವಿಸಿದ ಮೇಘಸ್ಫೋಟದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ.
ಕುಲು ಜಿಲ್ಲೆಯ ಮಲಾನಾ ಮತ್ತು ಮಣಿಕರಣ್ ಪ್ರದೇಶಗಳು ಹೊರ ಜಗತ್ತಿನ ಸಂಪರ್ಕ ಕಳೆದುಕೊಂಡಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಡ್ಡಗಾಡು ಪ್ರದೇಶದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರಲಿದೆ. ಭೂಕುಸಿತದಿಂದ ಹಲವು ವಾಹನಗಳು ಜಖಂಗೊಂಡಿದೆ. ಲಾರ್ಜಿ, ಪಾಂಡೋ ಮತ್ತು ಬಿಲಾಸಪುರ ವಲಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.