ಉತ್ತರಪ್ರದೇಶದ ಮೀರತ್ನ ಖುರ್ಜಾನಗರದ ಮಸೀದಿಯೊಂದರಲ್ಲಿ ವ್ಯಕ್ತಿಯೊಬ್ಬನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.
ಇದ್ರಿಸ್(65) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮೃತನ ಪುತ್ರ ಮೊದಲು ವ್ಯಕ್ತಯೋರ್ವನು ಬಂದು ನಮ್ಮ ತಂದೆಯ ಮೇಲೆ ಹಲ್ಲೆ ಮಾಡಲು ಶುರು ಮಾಡಿದ್ದನ್ನು ನಂತರ ನಮ್ಮ ತಂದೆ ಗಾಬರಿಯಿಂದ ಮಸೀದಿಯೊಳಗೆ ಓಡಿ ಹೋದರು ಆ ನಂತರ ಕಂಟ್ರಿ ಪಿಸ್ತೂಲ್ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಎಂದು ಘಟನೆಯ ಕುರಿತು ಪೊಲೀಸರಿಗೆ ತಿಳಿಸಿದ್ದಾರೆ.
ವಿಷಯ ತಿಳಿಯುತಲ್ಲೇ ಸ್ಥಳಕ್ಕೆ ಧಾವಿಸಿದ ಐಜಿ ಪ್ರವೀಣ್ ಕುಮಾರ್, ಜಿಲ್ಲಾ ಮ್ಯಜಿಸ್ಟ್ರೇಟ್ ಚಂದ್ರಪ್ರಕಾಶ್ ಸಿಂಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು ನಮ್ಮ ಸಮುದಾಯಕ್ಕೆ ಸೇರಿದವರೇ ಕೃತ್ಯ ಎಸಗಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಘಟನೆಯು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಕುಟುಂಬಸ್ಥರ ದೂರಿನ ಮೇರೆಗೆ ಮೂವರು ಶಂಕಿತರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವಲಯ ಐಜಿ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.