ದೇವರನಾಡು ಕೇರಳದಲ್ಲಿ ದಿನದಿಂದ ದಿನಕ್ಕೆ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗ ತೊಡಗಿದ್ದು ಕಣ್ಣೂರು ಮೂಲದ 31 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದ್ದು ಇದು ಒಟ್ಟಾರೆ ಎರಡನೇ ಪ್ರಕರಣವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜುಲೈ 13ರಂದು ದುಬೈನಿಂದ ಮಂಗಳೂರಿಗೆ ಬಂದಿಳಿದ ವ್ಯಕ್ತಿಯಲ್ಲಿ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ಅವರ ಮಾದರಿಗಳನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(NIV)ಗೆ ಕಳುಹಿಸಲಾಗಿದ್ದು ಮತ್ತು ಅಲ್ಲಿ ನಡೆಸಿದ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿರುವುದಾಗಿ ತಿಳಿದು ಬಂದಿದೆ.








