• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಡವರ ಮೇಲೆ ಹೆಚ್ಚಿನ ತೆರಿಗೆ ಹಾಕಿ, ಶ್ರೀಮಂತರಿಗೆ ತೆರಿಗೆ ವಿನಾಯ್ತಿ ನೀಡುತ್ತಿದ್ದಾರೆ : ಕೃಷ್ಣ ಭೈರೇಗೌಡ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
July 20, 2022
in ಕರ್ನಾಟಕ, ರಾಜಕೀಯ
0
ಬಡವರ ಮೇಲೆ ಹೆಚ್ಚಿನ ತೆರಿಗೆ ಹಾಕಿ, ಶ್ರೀಮಂತರಿಗೆ ತೆರಿಗೆ ವಿನಾಯ್ತಿ ನೀಡುತ್ತಿದ್ದಾರೆ : ಕೃಷ್ಣ ಭೈರೇಗೌಡ ಕಿಡಿ
Share on WhatsAppShare on FacebookShare on Telegram

ಬಡವರ ಮೇಲೆ ಹೆಚ್ಚಿನ ತೆರಿಗೆ ಹಾಕಿ, ಶ್ರೀಮಂತರು ಕಟ್ಟುವ ಕಾರ್ಪೋರೇಟ್ ತೆರಿಗೆಯನ್ನು ಶೇ.30ರಿಂದ ಶೇ.22ಕ್ಕೆ, ಶೇ.25ರಿಂದ ಶೇ.15ಕ್ಕೆ ಇಳಿಸಿದ್ದಾರೆ. ನೂರಾರು ಕೋಟಿ ವ್ಯವಹಾರ ಮಾಡುವವರ ಮೇಲೆ ತೆರಿಗೆ ಇಳಿಸಿ, ಅಲ್ಲಿನ ನಷ್ಟವನ್ನು ಬಡವರು ಬಳಸುವ ಪದಾರ್ಥಗಳ ಮೇಲೆ ಹಾಕುತ್ತಿರುವುದು ದೇಶದ ಸಂವಿಧಾನ, ಸಮಾಜದ ಆಶಯಕ್ಕೆ ತದ್ವಿರುದ್ಧವಾಗಿದೆ ಎಂದು ಜಿಎಸ್ ಟಿ ವಿಚಾರವಾಗಿ ಮಾಜಿ ಸಚಿವ ಕೃಷ್ಣ ಭೈರೇಗೌಡ ಕಿಡಿಕಾರಿದ್ದಾರೆ.

ADVERTISEMENT

ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,  ಜಿಎಸ್ ಟಿ ಆರಂಭವಾದಾಗಲೇ ಆಹಾರ ಪದಾರ್ಥಗಳು ಪ್ಯಾಕೇಜ್ ಆಗಿದ್ದರೂ ಅವುಗಳನ್ನು ಜಿಎಸ್ ಟಿಯಿಂದ ಹೊರಗಿಡಬೇಕು ಎಂದು ನಾವು ಪ್ರತಿಪಾದನೆ ಮಾಡಿದ್ದೇವೆ. ಈ ಬಗ್ಗೆ ಚರ್ಚೆ ಮಾಡಿದ ನಂತರವಷ್ಟೇ ಸಾಮಾನ್ಯ ವರ್ಗದವರು ಬಳಸುವ ಆಹಾರ ಪದಾರ್ಥ ಹೊರಗಿಡಬೇಕು ಎಂದು ತೀರ್ಮಾನಿಸಲಾಗಿತ್ತು ಎಂದು ಹೇಳಿದ್ದಾರೆ.

ಆದರೆ ಈಗ ಇವುಗಳನ್ನು ಬದಲಾವಣೆ ಮಾಡುತ್ತಿರುವುದು ಆಶ್ಚರ್ಯಕರ ವಿಚಾರವಾಗಿದೆ. ಈ ಆಹಾರ ಪದಾರ್ಥಗಳನ್ನು ತೆರಿಗೆ ವ್ಯಾಪ್ತಿಗೆ ತೆಗೆದುಕೊಂಡು ಬಂದರೂ ಕೂಡ ಸರ್ಕಾರಕ್ಕೆ ಇದರಿಂದ ದೊಡ್ಡ ಆದಾಯ ಬರುವುದಿಲ್ಲ. ಈ ತೆರಿಗೆ ಸರಿಯಾಗಿ ಪಾವತಿ ಮಾಡಲಾಗುತ್ತಿದೆಯೇ ಇಲ್ಲವೇ ಎಂದು ತೆರಿಗೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಲು ಸಾಧ್ಯವಾಗುವುದಿಲ್ಲ. ಇದರಿಂದ ಲಾಭ ನಷ್ಟ ಹಾಕಿದ ನಂತರವಷ್ಟೇ ಇವುಗಳನ್ನು ತೆರಿಗೆ ವ್ಯಾಪ್ತಿಯಿಂದ ಬಿಡುವುದು ಉತ್ತಮ ಎಂದು ತೀರ್ಮಾನಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಸರ್ಕಾರ ದೊಡ್ಡ ಹಂತದಲ್ಲಿ ಸಂಪನ್ಮೂಲ ಸೋರಿಕೆಯಾಗುತ್ತಿರುವ ಕಡೆ ಗಮನಹರಿಸಬೇಕು. ದೊಡ್ಡವರು ತೆರಿಗೆ ಕಟ್ಟುತ್ತಿಲ್ಲ, ಅವರ ಬದಲಾಗಿ ಬಡಪಾಯಿಗಳ ಮೇಲೆ ಹೊರೆ ಹಾಕಿ ನಷ್ಟ ಭರಿಸಲು ಮುಂದಾಗಿರುವುದು, ಬಡವರ ರಕ್ಷಣೆ ಮಾಡಬೇಕು ಎಂಬ ಸ್ವತಂತ್ರ ಭಾರತ ಸಿದ್ಧಾಂತವನ್ನೇ ಬುಡಮೇಲು ಮಾಡುವ ಪ್ರಯತ್ನವಾಗಿದೆ. ಬಡವರ ಮೇಲೆ ಹೆಚ್ಚಿನ ತೆರಿಗೆ ಹಾಕಿ, ಶ್ರೀಮಂತರು ಕಟ್ಟುವ ಕಾರ್ಪೋರೇಟ್ ತೆರಿಗೆಯನ್ನು ಶೇ.30ರಿಂದ ಶೇ.22ಕ್ಕೆ, ಶೇ.25ರಿಂದ ಶೇ.15ಕ್ಕೆ ಇಳಿಸಿದ್ದಾರೆ. ನೂರಾರು ಕೋಟಿ ವ್ಯವಹಾರ ಮಾಡುವವರ ಮೇಲೆ ತೆರಿಗೆ ಇಳಿಸಿ, ಅಲ್ಲಿನ ನಷ್ಟವನ್ನು ಬಡವರು ಬಳಸುವ ಪದಾರ್ಥಗಳ ಮೇಲೆ ಹಾಕುತ್ತಿರುವುದು ದೇಶದ ಸಂವಿಧಾನ, ಸಮಾಜದ ಆಶಯಕ್ಕೆ ತದ್ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

ಇನ್ನು ಕಂಪನಿಗಳು ಈ ತೆರಿಗೆ ಹೊರೆಯನ್ನು ಗ್ರಾಹಕರ ಮೇಲೆ ಹಾಕದಂತೆ ಕಂಪನಿಗಳಿಗೆ ಸೂಚಿಸಲಾಗುವುದು ಎಂಬ ಮುಖ್ಯಮಂತ್ರಿಗಳ ಸಮರ್ಥನೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಜಿಎಸ್ ಟಿ ಆರಂಭವಾದಾಗಿನಿಂದಲೂ ಈ ಕತೆ ಕೇಳುತ್ತಲೇ ಇದ್ದೇವೆ. ಕಂಪನಿಗಳು ಪದಾರ್ಥ ಖರೀದಿ ಮಾಡುವಾಗ ಕಟ್ಟುವ ತೆರಿಗೆಯನ್ನು ಇನ್ ಪುಟ್ ಟ್ಯಾಕ್ಸ್ ಎಂದು ಮತ್ತೆ ಅವರಿಗೆ ಮರುಪಾವತಿ ಮಾಡಲಾಗುತ್ತದೆ. ಹೀಗಾಗಿ ಕಂಪನಿಗಳು ತೆರಿಗೆ ಹೊರೆಯನ್ನು ಸಂಪೂರ್ಣವಾಗಿ ಗ್ರಾಹಕರ ಮೇಲೆ ಹಾಕುವ ಅಗತ್ಯವಿಲ್ಲ ಎಂದಿದ್ದಾರೆ.

ಆದರೆ, ಜಿಎಸ್ ಟಿ ಜಾರಿ ಬಂದಾಗಿನಿಂದ ಯಾವ ಕಂಪನಿಗಳು ತಮಗೆ ಸಿಗುತ್ತಿರುವ ಲಾಭವನ್ನು ಗ್ರಾಹಕರಿಗೆ ವರ್ಗಾವಣೆ ಮಾಡಿಲ್ಲ. ಇಂತಹ ಕಂಪನಿಗಳ ಮೇಲೆ ಸರ್ಕಾರವು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಕಂಪನಿಗಳು ಸರ್ಕಾರಕ್ಕೆ ಕಟ್ಟುವ ತೆರಿಗೆ ಹಾಗೂ ಕಂಪನಿಗೆ ಮರುಪಾವತಿಯಾಗುವ ತೆರಿಗೆ ಎರಡನ್ನೂ ಗ್ರಾಹಕನಿಂದಲೇ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಒಂದು ಕಡೆ ಕಂಪನಿಗಳು ಲಾಭ ಹಾಗೂ ಅಧಿಕ ಲಾಭ ಎರಡನ್ನೂ ಜನಗಳಿಂದಲೇ ವಸೂಲಿ ಮಾಡಲಾಗುತ್ತಿದೆ. ಮತ್ತೊಂದು ಕಡೆ ಜನರು ಕಂಪನಿಯ ಲಾಭ, ಮರು ಪಾವತಿಯ ತೆರಿಗೆ ಲಾಭ ಹಾಗೂ ಸರ್ಕಾರಕ್ಕೆ ತೆರಿಗೆ ಈ ಮೂರರ ಹೊರೆಯನ್ನು ಹೊರಬೇಕಿದೆ. ಈ ವಾಸ್ತವಾಂಶ ಮುಖ್ಯಮಂತ್ರಿಗಳಿಗೆ ಸ್ಪಷ್ಟವಾಗಿ ತಿಳಿದಿದೆ. ಈ ವಿಚಾರವನ್ನು ಮುಚ್ಚಿ ಹಾಕಲು ಜನರನ್ನು ತಪ್ಪುದಾರಿಗೆ ಎಳೆಯಲು ಸುಳ್ಳು ಹೇಳುತ್ತಿದ್ದಾರೆ. ಇದು ದುರಾದೃಷ್ಟದ ವಿಚಾರ.’ ಎಂದು ವಿವರಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಂಡ್‌ಶೀಲ್ಡ್‌ನಲ್ಲಿ ಬಿರುಕು; ತುರ್ತು ಭೂಸ್ಪರ್ಶ ಮಾಡಿದ ಗೋ ಫರ್ಸ್ಟ್ ವಿಮಾನ

Next Post

ಕೈದಿಗಳಿಗೆ ಕೂಲಿ ಮೊತ್ತ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಮಾಡಲಾಗಿದೆ, ಆದೇಶ ಹೊರಡಿಸಿಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ

ಕೈದಿಗಳಿಗೆ ಕೂಲಿ ಮೊತ್ತ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಮಾಡಲಾಗಿದೆ, ಆದೇಶ ಹೊರಡಿಸಿಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada