ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮಂಗಳವಾರ ವಿಚಾರಣೆಗೆ ಹಾಜರಾಗಿದ್ದಾರೆ.
ಮಂಗಳವಾರ ವಿಚಾರಣೆ ಶುರುವಾಗುವುದಕ್ಕು ಮುನ್ನ ನಡೆದ ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮೆಂದಳೆಯನ್ನು ಹಿಡಿದು ದೆಹಲಿ ಪೊಲೀಸರು ಎಳೆದಾಡಿದ್ದಾರೆ.
ಸದ್ಯ ಶ್ರೀನಿವಾಸ್ ಕೂದಳನ್ನು ಪೊಲೀಸರು ಹಿಡಿದು ಎಳೆದಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀನಿವಾಸ್ ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆ ಕುರಿತು ವ್ಯಾಪಕವಾಗಿ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಶಿಸ್ತು ತೋರಿದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಜರುಗಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.