ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರ್ ಅವರ ಅಂತಿಮ ನಮನ ಸಲ್ಲಿಸಲು ಹೋದಾಗ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಅವರಿಗೆ ಅಂತಿಮ ನಮನ ಸಲ್ಲಿಸಲು ಹೋದಾಗ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ನಳಿನ್ ಕಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಮೇಲೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
Also Read : ಸಿಎಂ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಇನ್ನೆಷ್ಟು ಮಂದಿ ಬಲಿ ಬೇಕು? : ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ
ಬಿಜೆಪಿ ಅಧ್ಯಕ್ಷರ ಕಾರಿಗೆ ಘೇರಾವ್ ಹಾಕಿದ ಮತ್ತು ಇತರ ನಾಯಕರ ಮೇಲೆ ಹಲ್ಲೆ ಮಾಡಿದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರನ್ನು ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಹಲ್ಲೆಗೆ ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಮುಖಂಡ 31 ವರ್ಷ ಪ್ರವೀಣ್ ಕುಮಾರ್ ನೆಟ್ಟಾರುನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.



