ಹಾಲಿ ಸಂಸತ್ ಮುಂಗಾರು ಅಧಿವೇಶನದಲ್ಲಿ ಅಮಾನತಾಗಿರುವ 19 ಸಂಸದರು ಕ್ಷಮೆಯಾಚಿಸಿ ಫಲಕಗಳನ್ನು ಪ್ರದರ್ಶಿಸುವುದಿಲ್ಲ ಎಂದು ಭರವಸೆ ನೀಡಿದರೆ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಇಲ್ಲಿಯವರೆಗೂ ಒಟ್ಟು 24 ಸಂಸದರು ಅಮಾನತು ಆಗಿದ್ದು ರಾಜ್ಯಸಭೆಯ 20 ಹಾಗೂ ಲೋಕಸಭೆಯ 4 ಸಂಸದರು ಸಂಸತ್ತಿನಲ್ಲಿ ಪ್ರತಿಭಟಿಸಿದ ಕಾರಣಕ್ಕಾಗಿ ಅಮಾನತ್ತಾಗಿದ್ದಾರೆ.
ಬೆಲೆ ಏರಿಕೆ ಕುರಿತು ಸರ್ಕಾರ ಚರ್ಚೆಗೆ ಸಿದ್ದವಾಗಿದೆ ಕೋವಿಡ್ ನಂತರ ನಮ್ಮ ಆರ್ಥಿಕತೆ ಸುಸ್ಥಿತಿಯಲ್ಲಿದೆ ಎಂದಿದ್ದಾರೆ.
