12ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಮೂಲಕ ತಮಿಳುನಾಡಿನಲ್ಲಿ ಕಳೆದ ಎರಡು ವಾರದಲ್ಲಿ 5ನೇ ಪ್ರಕರಣ ಇದಾಗಿದೆ.
ಶಿವಗಂಗಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಗಣಿತ ಹಾಗೂ ಬಯೋಲಾಜಿ ವಿಷಯಗಳು ಕಷ್ಟವಾಗಿದೆ ಎಂದು ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಳೆದ 2 ವಾರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದು,ಇದು 5ನೇ ಪ್ರಕರಣವಾಗಿದೆ. 5 ವಿದ್ಯಾರ್ಥಿಗಳಲ್ಲಿ ನಾಲ್ವರು 12ನೇ ತರಗತಿ ಹಾಗೂ ಒಬ್ಬರು 11ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ.

ಶಿವಕಾಶಿಯಲ್ಲಿ ಇಂದು ಬೆಳಿಗ್ಗೆ 11ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿತ್ತು.