ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರೆ ಹತ್ಯೆ ಸಂಬಂಧ ಸುಳ್ಯದ ಬೆಳ್ಳಾರೆಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಲ್ಲಿಯವರೆಗು ಒಟ್ಟು 15ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದು ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ರಾಷ್ಟ್ರೀಯ ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೇರಳ ನೋಂದಣಿ ಇರುವ ಬೈಕ್ ಬಳಸಿರುವ ಸಾಧ್ಯತೆ ಹೆಚ್ಚಿದ್ದು ಅದನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.
