ಒಂದು ವಾರದಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿ. ನಂತರ ಕೂಡಲೇ ಬಿಬಿಎಂಪಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಚುನಾವಣೆ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ನ್ಯಾ.ಎ.ಎಂ ಖಾನಿಲ್ಕರ್ ಪೀಠ, 8 ವಾರಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಲಾಗಿತ್ತು. ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು ಮೀಸಲಾತಿ ಸಂಬಂಧ ರಚಿಸಲಾಗಿದ್ದ ಭಕ್ತವತ್ಸಲ ಸಮಿತಿ ವರದಿ ವಿಳಂಬವಾಗಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ವರದಿ ನೀಡಿತ್ತು.
ವಾದ ಆಲಿಸಿದ ಪೀಠ ವರದಿ ಆಧರಿಸಿ ಇಂದಿನಿಂದ ಒಂದು ವಾರದಲ್ಲಿ ಬಿಬಿಎಂಪಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು ಎಂದು ಆದೇಶ ನೀಡಿತು.

ಸರ್ಕಾರ ಮೀಸಲಾತಿ ಪ್ರಕಟಿಸಿದ ಬಳಿಕ ಚುನಾವಣಾ ಆಯೋಗ ಚುನಾವಣಾ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಿತು.
ಸುಪ್ರೀಂಕೋರ್ಟ್ ಆದೇಶದಿಂದ ವರ್ಷಗಳಿಂದ ಬಾಕಿ ಉಳಿದಿದ್ದ ಬಿಬಿಎಂಪಿ ಚುನಾವಣೆ ಸನ್ನಿಹಿತವಾಗಿದ್ದು ಅಗಸ್ಟ್ ಎರಡನೇ ವಾರದಲ್ಲಿ ಬಿಬಿಎಂಪಿಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ.