ಭಾರತದ ಮೊದಲ ಮಂಕಿಪಾಕ್ಸ್ ರೋಗಿಯಾದ ಕೇರಳದ ವ್ಯಕ್ತಿಯೊಬ್ಬರು ವೈರಸ್‌ನಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. 35 ವರ್ಷದ ಕೊಲ್ಲಂ ಮೂಲದ ವ್ಯಕ್ತಿ ಇಂದು ಜುಲೈ 30 ರಂದು ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಯುಎಇಯಿಂದ ಜುಲೈ 12 ರಂದು ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಬಂದ ವ್ಯಕ್ತಿ ಜುಲೈ 14 ರಂದು ಮಂಕಿಪಾಕ್ಸ್ ರೋಗಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಪರಿಕ್ಷೆಗೆ ಒಳಪಡಿಸಿದಾಗ ಮಂಕಿಪಾಕ್ಸ್ ಇರುವುದು ದೇಢವಾಗಿತ್ತು.
ಚೇತರಿಸಿಕೊಂಡ ನಂತರ ಎರಡು ಭಾರಿ ಪರೀಕ್ಷೆಗೆ ಒಳಪಡಿಸಿದ್ದು, ಎರಡು ಬಾರಿಯೂ ನೆಗೆಟಿವ್ ರಿಪೋರ್ಟ್ ಬಂದಿದೆ. ರೋಗಿಯು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಚರ್ಮದ ದದ್ದುಗಳು ಸಂಪೂರ್ಣವಾಗಿ ಗುಣಮುಖವಾಗಿವೆ. ಅವರನ್ನು ಇಂದು ಡಿಸ್ಚಾರ್ಜ್ ಮಾಡಲಾಗುವುದು” ಎಂದು ಕೇರಳ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ.

ಏತನ್ಮಧ್ಯೆ, ಮಂಕಿಪಾಕ್ಸ್ ಸೋಂಕಿಗೆ ಒಳಗಾಗಿದ್ದ ಉಳಿದ ಇಬ್ಬರ ಆರೋಗ್ಯ ಸ್ಥಿತಿ ನಾರ್ಮಲ್ ಇದೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಭಾರತದ ಮೊದಲ ಮೂರು ಮಂಕಿಪಾಕ್ಸ್ ಪ್ರಕರಣಗಳು ವರದಿಯಾದ ನಂತರ ಕೇರಳ ಸರ್ಕಾರವು ಅಗತ್ಯ ಕ್ರಮಗಳನ್ನು ಹೆಚ್ಚಿಸಿದೆ.