ಏಪ್ರಿಲ್, ಮೇ 2022ರಲ್ಲಿ ನಡೆದಿದ್ದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಫಲಿತಾಂಶದ ಬಳಿಕ, ಮರು ಮೌಲ್ಯಮಾಪನ, ಮರು ಎಣಿಕೆಗೆ ಸಲ್ಲಿಸಲಾಗಿದ್ದ ವಿದ್ಯಾರ್ಥಿಗಳ ಫಲಿತಾಂಶವನ್ನು ಇಂದು ಪ್ರಕಟಗೊಂಡಿದೆ.
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಮಾಡುದ್ದು, ಏಪ್ರಿಲ್, ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 18-06-2022ರಂದು ಪ್ರಕಟಿಸಲಾಗಿತ್ತು. ಅಂಕಗಳಲ್ಲಿ ತಕರಾರು ಇದ್ದ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಮತ್ತು ಮರು ಎಣಿಕೆಗೆ ಅರ್ಜಿಯನ್ನು ಸಲ್ಲಿಸಿದ್ದರು. ಇದೀಗ ಅದರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಸದರಿ ಫಲಿತಾಂಶವನ್ನು ಇಲಾಖೆಯ ವೆಬ್ ಸೈಟ್ https://pue.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದೆ.







